ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಕನಿಷ್ಠ ಸೌಲಭ್ಯ ನೀಡದ ಆರೋಪ ಹಿನ್ನೆಲೆಯಲ್ಲಿ ಖುದ್ದು ಪರಿಶೀಲನೆ ನಡೆಸುವಂತೆ ಕೋರಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ನಟ ದರ್ಶನ್ ಪರ ವಕೀಲರಾದ ಸುನೀಲ್ ಅವರು ಅರ್ಜಿ ಸಲ್ಲಿಸಿದ್ದಾರೆ. ಜೈಲು ಅಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿಲ್ಲ. ಆದೇಶ ಪಾಲಿಸಿದ್ದೇವೆಂದು ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಖುದ್ದು ಪರಿಶೀಲಿಸುವಂತೆ ಅರ್ಜಿಯಲ್ಲಿ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ.YUISI Sun Hat for Men Women, Breathable Summer Hat for Travel, Hiking, Gardening, Sun Hats for Men & Round Sun Cap for Hiking, Hats for Women Indoor Outdoor Activities
- ನಟ ದರ್ಶನ್ ಪರ ವಕೀಲರಾದ ಸುನೀಲ್ ಅವರು ಸಲ್ಲಿಸಿರುವ ಈ ಅರ್ಜಿಯ ಪ್ರಕಾರ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ, ದರ್ಶನ್ ಅವರಿಗೆ ಹಾಸಿಗೆ, ತಲೆದಿಂಬು, ವ್ಯಾಯಾಮಕ್ಕೆ ಸಾಕಷ್ಟು ಸಮಯ ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ನೀಡಿಲ್ಲ.ಇದನ್ನು ಓದಿ: ಬಿಷ್ಣೋಯ್ ಗ್ಯಾಂಗ್-ಬಿಕೆಐ ಭಯೋತ್ಪಾದಕ ಗ್ಯಾಂಗ್ ಸಂಪರ್ಕ ಪ್ರಕರಣ: 22ನೇ ಆರೋಪಿ ವಿರುದ್ಧ NIA ಚಾರ್ಜ್‌ಶೀಟ್
- ಅಲ್ಲದೆ, ಅವರನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಿ, ಬ್ಯಾರಕ್ಗೆ ಸ್ಥಳಾಂತರಿಸದೆ ಕಡಿಮೆ ಸಮಯದಲ್ಲಿ ವ್ಯಾಯಾಮ ಮಾಡುವ ಅವಕಾಶ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ "ಆದೇಶ ಪಾಲಿಸಿದ್ದೇವೆ" ಎಂದು ತಪ್ಪು ವರದಿ ಸಲ್ಲಿಸಿದ್ದಾರೆ ಎಂದೂ ದರ್ಶನ್ ಪರ ವಕೀಲರು ತಿಳಿಸಿದ್ದಾರೆ.
- ಸೆಪ್ಟೆಂಬರ್ 9 ರಂದು ನ್ಯಾಯಾಲಯವು ದರ್ಶನ್ ಅವರಿಗೆ ಕರ್ನಾಟಕ ಕಾರಾಗೃಹಗಳ ಕೈಪಿಡಿ ಪ್ರಕಾರ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶ ನೀಡಿತ್ತು. - ಆದರೂ, ಆದೇಶ ಪಾಲಿಸದಿರುವುದು ಗಮನಕ್ಕೆ ಬಂದಿದ್ದು, ಇದರಿಂದ ಖುದ್ದು ಪರಿಶೀಲನೆಗೆ ಮನವಿ ಮಾಡಲಾಗಿದೆ. ವಿಚಾರಣೆಯಲ್ಲಿ ದರ್ಶನ್ ಪರ ಹಾಗೂ ಸರ್ಕಾರ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ನಡೆದ ನಂತರ, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.