ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದ್ದು, ವಿಶೇಷವಾಗಿ ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಭಾರೀ ಮಳೆಯ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಮುಂಜಾಗ್ರತೆ ವಹಿಸಲು ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಸೋಮವಾರದವರೆಗೂ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಇನ್ನೊಂದು ವಾರದಲ್ಲಿ ಮುಂಗಾರು ನಿರ್ಗಮನವಾಗಲಿದ್ದು, ಹಿಂಗಾರು ಮಳೆ ಆಗಮಿಸಲಿದೆ ಎಂದು ತಿಳಿಸಿದೆ.
ಈ ಸಲುವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಅ. 14 ರ ತನಕ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ಆ ಬಳಿಕ ತಗ್ಗಲಿರುವ ಮಳೆ ಪ್ರಮಾಣದಿಂದ ನಗರ ಪ್ರದೇಶದ ಜನರು ಮಳೆಯಿಂದುಂಟಾಗುವ ಅವಾಂತರಗಳಿಂದ ಎಚ್ಚೆತ್ತುಕೊಳ್ಳಲು ನಿರ್ದೇಶಿಸಲಾಗಿದೆ.
ಈ ಹಿನ್ನಲೆಯಲ್ಲಿ ರಾಮನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಸತತ ಮಳೆಯ ಕಾರಣ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನವಸತಿ ಪ್ರದೇಶದ ರಸ್ತೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ. Amazon Brand - Solimo Stainless Steel Water Bottle | BIS-Approved | 900ml (Dual Colour)
ಬೆಂಗಳೂರಲ್ಲಿ ಬಿರುಸಿನ ಮಳೆ -
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಸುರಿದ ಭಾರೀ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ವಾಹನ ಸಂಚಾರ ತಡೆಯುಂಟಾಗಿದೆ. ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಸಹ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಬಿರುಸಿನ ಮಳೆ ಸುರಿಯುವುದಾಗಿ ವರದಿ ತಿಳಿಸಿದೆ.
ಸಂಜೆಯಿಂದ ಆರಂಭವಾದ ಈ ಮಳೆಯು ಇಂದು ಮುಂದುವರಿದಿದ್ದು, ನಗರದ ಹಲವು ಭಾಗಗಳಲ್ಲಿ ತಂಪಾದ ಗಾಳಿ ಮತ್ತು ಮಳೆಯಿಂದ ತಂಪುಗೊಂಡಿದೆ. ಈ ನಡುವೆ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದ್ದು, ದಾಖಲು ಮಳೆಯ ಪರಿಣಾಮ, ರಸ್ತೆಗಳಲ್ಲಿ ನೀರು ನಿಲ್ಲುವ, ಸಾರಿಗೆಯಲ್ಲಿ ಸ್ಥಗಿತತೆ ಉಂಟಾಗಬಹುದು. ಈ ನಿಟ್ಟಿನಲ್ಲಿ ಪ್ರಯಾಣಿಕರು ಜಾಗ್ರತೆ ವಹಿಸಲು, ಹವಾಮಾನ ಇಲಾಖೆಯು ಸೂಚಿಸಿದೆ. ಇದನ್ನೂ ಓದಿ: ಕೆಮ್ಮಿನ ಸಿರಪ್, ಮಕ್ಕಳ ಸಾವು ವಿಚಾರ: PIL ವಜಾಗೊಳಿಸಿದ ಸುಪ್ರೀಂ ಕೋರ್ಟ್