ಬೆಂಗಳೂರು: ಈ ಹಿಂದೆ ವಿಧಾನಸೌಧದಲ್ಲಿ ಬಾಂಬಿಟ್ಟ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್ ಖುಲಾಸೆ ಆಗಿದ್ದರು. ಆದಾದ ನಂತರವೂ ಹಲವು ಸಂದರ್ಭಗಳಲ್ಲಿ ಅದನ್ನು ಕುರಿತು ಗಿರೀಶ್ ಮಟ್ಟಣ್ಣನವರ್ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.TRASE Block Heels Sandals For Women, Dusky Stylish & Comfortable Footwear
ರಾಜಧಾನಿಯ ಶಾಸಕರ ಭವನದ ಬಳಿ ಗಿರೀಶ್ ಬಾಂಬ್ ಇಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮತ್ತೆ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಸಂಬರಗಿ ದೂರು ನೀಡಿದ್ದಾರೆ.ಇದನ್ನು ಓದಿ: ವಿಚಾರಣಾಧೀನ ಕೈದಿಗಳಿಗೆ ಮತದಾನ ಹಕ್ಕು...ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ!
ಪ್ರಕರಣ ಈಗಾಗಲೇ ಕೋರ್ಟ್ ನಲ್ಲಿ ಖುಲಸೆಯಾಗಿದ್ದರು ಹೊಸ ಸಾಕ್ಷಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಹಲವು ಸಂದರ್ಭಗಳಲ್ಲಿ ಈ ಕುರಿತು ಮಾತನಾಡಿದ್ದಾರೆ ಎಂದು ಪ್ರಶಾಂತ್ ದೂರಿನಲ್ಲಿ ತಿಳಿಸಿದ್ದಾರೆ.
ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮತ್ತೆ ಗಿರೀಶ್ ಮಟ್ಟಣ್ಣನವರ್ ಅವರಿಗೆ ಸಂಕಷ್ಟ ಎದುರಾಗಿದೆ.