ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಐ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದ ಐದು ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್, ಮತ್ತು ಮಂಜುನಾಥ್ ಎಂ.ಸಿ ಮಂಜು ಹೆಸರಿನ ಖಾತೆಗಳ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳು 67, 66, 66(C) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಇದನ್ನೂ ಓದಿ: ದೆಹಲಿಯಲ್ಲಿ ಆಫ್ಘಾನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರ ಬಹಿಷ್ಕಾರ ವಿಚಾರ: ಸ್ಪಷ್ಟನೆ ನೀಡಿದ MEA
ಶೂ ಎಸೆತದ ಘಟನೆ ಕುರಿತು ಪ್ರಕಟವಾದ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅಸಭ್ಯ ಮತ್ತು ಬೆದರಿಕೆ ಒಡ್ಡುವ ಕಾಮೆಂಟ್‌ಗಳನ್ನು ಪ್ರಕಟಿಸಿದ್ದರು. ಇದನ್ನು ಗಮನಿಸಿದ ಸೈಬರ್ ಕ್ರೈಂನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಘಟನೆ ಅಕ್ಟೋಬರ್ 6 ರಂದು ನಡೆದಿದ್ದು, ನ್ಯಾಯಾಲಯದಲ್ಲಿ ಕಲಾಪ ನಡೆಸುತ್ತಿದ್ದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದರು. ಈ ಘಟನೆಗೆ ಮುಖ್ಯ ನ್ಯಾಯಮೂರ್ತಿ ಗವಾಯಿ ತಾಳ್ಮೆಯಿಂದ ಪ್ರತಿಕ್ರಿಯಿಸಿದ್ದರು.ಇದನ್ನೂ ಓದಿ: ಆಫ್ಗಾನ್ ವಿದೇಶಾಂಗ ಸಚಿವರ ಸುದ್ದಿಗೋಷ್ಠಿ: ಮಹಿಳಾ ಪತ್ರಕರ್ತರ ನಿರ್ಬಂಧವೇಕೆ? - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಗೆ ಪ್ರಶ್ನೆ!
ಘಟನೆಯಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯದಲ್ಲಿದ್ದ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದರು. ಈ ನಡುವೆ, ವಕೀಲ ರಾಕೇಶ್ ಕಿಶೋರ್, ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನದ ಬಗ್ಗೆ ತಮಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿದ್ದರು.ನಾನು ಮಾಡಿದ್ದು ಸರಿಯಿದೆ. ಈ ಪ್ರಕರಣದ ಸಲುವಾಗಿ ನಾನು ಯಾವುದೇ ಪರಿಣಾಮ ಎದುರಿಸಲು ಸಿದ್ಧನಿದ್ದೇನೆ. ನಾನು ಜೈಲಿಗೆ ಹೋಗುತ್ತೇನೆ. ಅಲ್ಲಿನ ದೇವರ ಹೆಸರಿನಲ್ಲಿ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದರು.C J Enterprise Womens Pure Banarasi Soft Silk Saree Kanjivaram Style Sarees With Blouse Piece For Wedding (KeriGola-51)