ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅ. 10 ರಂದು ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದರಲ್ಲದೇ, ಹುಡುಗಿಯರು ಮಧ್ಯರಾತ್ರಿ ಓಡಾಡುವುದನ್ನು ಅವರು ಪ್ರಶ್ನಿಸಿದ್ದಾರೆ. ಆಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಈ ಘಟನೆಗೆ ಯಾರು ಜವಾಬ್ದಾರರು?, ಆಕೆ ರಾತ್ರಿ 12.30 ರಲ್ಲಿ ಹೊರಗೆ ಬಂದದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಆರೋಪಿಗಳನ್ನು ಪೋಲಿಸರು ಹುಡುಕುತ್ತಿದ್ದು, ತಪ್ಪಿತಸ್ಥರು ಯಾರಿದ್ದರೂ ಕಠಿಣ