ಕಾಂಗ್ರೆಸ್ ಮಾಜಿ ಶಾಸಕ ದಿ. ಹುಟ್ಟೂರು ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಉಡುಪಿ, ಅಕ್ಟೋಬರ್ 14: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ರೈಲು ಹಳಿಯಲ್ಲಿ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾಂಗ್ರೆಸ್ ಮಾಜಿ ಶಾಸಕ ದಿ. ಹುಟ್ಟೂರು ಗೋಪಾಲ ಭಂಡಾರಿ ಅವರು 1999-2004 ಮತ್ತು 2008-2013ರ ಅವಧಿಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅವರ ಪುತ್ರ ದಾರುಣ ಸಾವನ್ನಪ್ಪಿದ್ದು, ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಸುದೀಪ್ ಭಂಡಾರಿ ಅರಣ್ಯ ಪ್ರದೇಶದಲ್ಲಿ ವೈನ್ ಶಾಪ್ ನಡೆಸುತ್ತಿದ್ದರು. ಅವರಿಗೆ ತಾಯಿ, ಒಬ್ಬ ಸಹೋದರ, ಒಬ್ಬ ಸಹೋದರಿ, ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ ಎಂಬುದು ತಿಳಿದು ಬಂದಿದೆ . Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable
ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಸುತ್ತುವರೆದಿದೆ, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಆರ್ಥಿಕ ಮುಗ್ಗಟ್ಟು ಅಥವಾ ಆರ್ಥಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಬ್ರಹ್ಮಾವರ ಪೊಲೀಸರು ಘಟನೆಯ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಬಯಲಾಗುವ ನಿರೀಕ್ಷೆಯಿದೆ.