ಬೆಂಗಳೂರು: ಸಚಿವ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ಮುಖ್ಯಮಂತ್ರಿ (ಸಿಎಂ), ಉಪಮುಖ್ಯಮಂತ್ರಿ (ಡಿಸಿಎಂ) ಹಾಗೂ ಹೈಕಮಾಂಡ್‌ಗೆ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದ್ದಾರೆ.ಇದನ್ನೂ ಓದಿ: ಗೋವಾದ ಮಾಜಿ ಮುಖ್ಯಮಂತ್ರಿ ರವಿ ನಾಯ್ಕ ಹೃದಯಾಘಾತದಿಂದ ನಿಧನ..ಗೋವಾ ರಾಜಕೀಯದಲ್ಲಿ ಶೋಕದ ಅಲೆ!
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಹಿರಿತನವನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ ಎಂದು ಯಾರು ಹೇಳಿದ್ದಾರೆ? ಕ್ರಾಂತಿ ಆಗುತ್ತದೆ. ಸಿಎಂ ಬದಲಾವಣೆ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ" ಎಂದರು.ಹೆಚ್ಚುವರಿಯಾಗಿ, ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ಅವರು, "ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ.ಇದನ್ನೂ ಓದಿ: 2025ರಲ್ಲಿ ಭಾರತವೇ ವಿಶ್ವದಲ್ಲಿ ವೇಗವಾಗಿ ಬೆಳೆಯುವ ಆರ್ಥಿಕ ಶಕ್ತಿ : IMF ವರದಿ
ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ. ಶಿವಕುಮಾರ್ ಶ್ರಮ ವಹಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅವಕಾಶ ಸಿಗುವ ನಂಬಿಕೆಯಿದೆ" ಎಂದು ಹೇಳಿದರು. ಈ ಹೇಳಿಕೆಗಳು ಕರ್ನಾಟಕ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಚರ್ಚೆಗಳನ್ನು ಪ್ರತಿಬಿಂಬಿಸುತ್ತವೆ ಮತ್ತು ನಾಯಕತ್ವ ಬೇಡಿಕೆಗಳು ತೀವ್ರಗೊಂಡಿರುವುದನ್ನು ಸೂಚಿಸುತ್ತವೆ.SIRIL Women's Chiffon Sequence Embroidery Lace Saree with Unstitched Blouse Piece