ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಸಚಿವ ಸ್ಥಾನದ ಜವಾಬ್ದಾರಿಯ ನಡುವೆಯೂ ತಮ್ಮ ಸಿನಿ ಕೆರಿಯರ್ ಮುಂದುವರಿಸಿದ್ದಾರೆ. ರಾಜಕೀಯ ಪ್ರವೇಶದ ನಂತರ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳದಿದ್ದರೂ, ಚುನಾವಣೆಗೆ ಮುನ್ನ ಸಹಿ ಹಾಕಿದ್ದ ಪ್ರಾಜೆಕ್ಟ್‌ಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಅವರ 'ಓಜಿ' ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದು, ಅವರ ಜನಪ್ರಿಯತೆ ಕುಗ್ಗಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ.
'ಓಜಿ' ಚಿತ್ರವು ಸೆಪ್ಟೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಇದೀಗ ಈ ಸಿನಿಮಾ ಒಟಿಟಿ ಪ್ರವೇಶಕ್ಕೆ ಸಿದ್ಧವಾಗಿದೆ. ಅಕ್ಟೋಬರ್ 23 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿಯೂ ಈ ಚಿತ್ರ ಲಭ್ಯವಿರಲಿದೆ.ESBEDA Glitter Top Handle Handbag | Ladies Purse | Stylish Handbag | Gift Bag For Women
ಸುಜೀತ್ ನಿರ್ದೇಶನದ ಈ ಚಿತ್ರಕ್ಕೆ ಪ್ರಭಾಸ್ ಅವರ 'ಸಾಹೊ' ಸಿನಿಮಾವನ್ನು ನಿರ್ದೇಶಿಸಿದ್ದ ಅನುಭವವಿದೆ. 'ಓಜಿ' ಬಾಕ್ಸ್ ಆಫೀಸ್‌ನಲ್ಲಿ 350 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಕೆಲವು ಆಂಧ್ರ ಮತ್ತು ತೆಲಂಗಾಣದ ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ, ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ಗೆ ಬರುತ್ತಿದೆ.ಇದನ್ನು ಓದಿ:ʼಕೆಜಿಎಫ್ 3ʼ ಬರ್ತಾ ಇದ್ಯಂತೆ! ನಿಜ ಏನು? ಶಾಕ್ ಕೊಟ್ಟ ಪ್ರಶಾಂತ್ ನೀಲ್ ಪೋಸ್ಟ್!
'ಓಜಿ' ಒಂದು ಗ್ಯಾಂಗ್‌ಸ್ಟರ್ ಕಥೆಯನ್ನು ಆಧರಿಸಿದ್ದು, ಪವನ್ ಕಲ್ಯಾಣ್ ಓಜಸ್ ಎಂಬ ಗಂಭೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಕಾಶ್ ರೈ, ಬಾಲಿವುಡ್ ನಟ ಇಮ್ರಾನ್ ಹಶ್ಮಿ ವಿಲನ್ ಪಾತ್ರದಲ್ಲಿ ಮತ್ತು ಅರ್ಜುನ್ ದಾಸ್ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಅಭಿನಯಿಸಿದ್ದಾರೆ. ಡಿವಿವಿ ಎಂಟರ್‌ಟೈನ್‌ಮೆಂಟ್ ಬಂಡವಾಳ ಹೂಡಿರುವ ಈ ಚಿತ್ರಕ್ಕೆ ಥಮನ್ ಸಂಗೀತ ನೀಡಿದ್ದಾರೆ.
ಡಿಸಿಎಂ ಆದ ನಂತರ ಪವನ್ ಕಲ್ಯಾಣ್ ಅವರ ಎರಡನೇ ಬಿಡುಗಡೆ 'ಓಜಿ'. ಇತ್ತೀಚೆಗೆ ತೆರೆಕಂಡಿದ್ದ 'ಹರಿ ಹರ ವೀರ ಮಲ್ಲು' ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಗಳಿಸಿರಲಿಲ್ಲ. ಪ್ರಸ್ತುತ ಪವನ್ ಕಲ್ಯಾಣ್ 'ಉಸ್ತಾದ್ ಭಗತ್ ಸಿಂಗ್' ಚಿತ್ರದಲ್ಲಿ ನಟಿಸುತ್ತಿದ್ದು, ಶ್ರೀಲೀಲಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹರೀಶ್ ಶಂಕರ್ ನಿರ್ದೇಶನದ ಈ ಚಿತ್ರ, ಅವರ ಬ್ಲಾಕ್‌ಬಸ್ಟರ್ ಹಿಟ್ 'ಗಬ್ಬರ್ ಸಿಂಗ್' ನಂತರ ಮತ್ತೊಂದು ನಿರೀಕ್ಷಿತ ಪ್ರಾಜೆಕ್ಟ್ ಆಗಿದೆ.