ಬೆಂಗಳೂರು (ಅಕ್ಟೋಬರ್ 15): ಕರ್ನಾಟಕ ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇಕಡಾ 35ರಿಂದ ಶೇಕಡಾ 33ಕ್ಕೆ ಇಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ದರವನ್ನು ಹೆಚ್ಚಿಸುವ ಉದ್ದೇಶದಿಂದಲೂ, ಸಿಬಿಎಸ್‌ಇ ಮತ್ತು ನೆರೆಯ ರಾಜ್ಯಗಳೊಂದಿಗೆ ಏಕರೂಪತೆ ತರುವ ದೃಷ್ಟಿಯಿಂದಲೂ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ 625 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 35 (219 ಅಂಕಗಳು) ಪಡೆಯುವುದು ಕಡ್ಡಾಯವಾಗಿತ್ತು. ಹೊಸ ನಿಯಮದ ಪ್ರಕಾರ 625 ಅಂಕಗಳಿಗೆ ಕನಿಷ್ಠ 206 ಅಂಕಗಳು (ಶೇಕಡಾ 33) ಪಡೆದರೆ ಸಾಕು. ಆದರೆ, ಪ್ರತಿ ವಿಷಯಕ್ಕೆ ಕಡ್ಡಾಯವಾಗಿ ಕನಿಷ್ಠ 30 ಅಂಕಗಳನ್ನು ಪಡೆದುಕೊಳ್ಳಲೇಬೇಕು. Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable
600 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 35 (210 ಅಂಕಗಳು) ಬೇಕಾಗಿತ್ತು. ಇನ್ನು ಮುಂದೆ ಕನಿಷ್ಠ 198 ಅಂಕಗಳು (ಶೇಕಡಾ 33) ಪಡೆದರೆ ಉತ್ತೀರ್ಣ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಮೌಲ್ಯಮಾಪನ ಅಂಕಗಳ ಸೇರಿ ಕನಿಷ್ಠ 30 ಅಂಕಗಳು ಬರುವುದು ಅನಿವಾರ್ಯ. ಪ್ರಥಮ ಭಾಷೆಯ ಗರಿಷ್ಠ ಅಂಕವನ್ನು 125ರಿಂದ 100ಕ್ಕೆ ಇಳಿಸುವ ಪ್ರಸ್ತಾಪ ಇನ್ನೂ ಅಂತಿಮವಾಗಿಲ್ಲ.
ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮತ್ತು ಹೊಸದಾಗಿ ನೇಮಕಗೊಂಡ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.