Skip to main content
ವಿಡಿಯೋ
1/3
general

ಸಚಿವ ಪ್ರಿಯಾಂಕ್‌ ಖರ್ಗೆ ಬೆದರಿಕೆ ಕರೆ ವಿಡಿಯೋ ರಿಲೀಸ್‌ - ನಿವಾಸಕ್ಕೆ ಪೋಲಿಸ್‌ ಬಿಗಿಭದ್ರತೆ!

By Shravanthi R
ಸಚಿವ ಪ್ರಿಯಾಂಕ್‌ ಖರ್ಗೆ ಬೆದರಿಕೆ ಕರೆ ವಿಡಿಯೋ ರಿಲೀಸ್‌ - ನಿವಾಸಕ್ಕೆ ಪೋಲಿಸ್‌ ಬಿಗಿಭದ್ರತೆ!

ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಹಿನ್ನಲೆ, ಅವರಿಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬಂದಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬಂದ ಬೆದರಿಕೆ ಕರೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ಸಾರ್ವಜನಿಕ ಸ್ಥಳಗಳು ಹಾಗೂ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದ ಐಟಿ - ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಅವರಿಗೆ ಬಂದಿರುವ ಜೀವ ಬೆದರಿಕೆ ಕರೆಗಳ ಹಿನ್ನಲೆಯ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಸ್ವತಃ ಖರ್ಗೆ ಇದಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್‌ ಖಾತೆ ಪೋಸ್ಟ್‌ ಮುಖಾಂತರ ಬೆದರಿಕೆ ಹಾಕುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. 


ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದಿಟ್ಟ ಹೆಜ್ಜೆಯಿಟ್ಟಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಅವರು ಬೆಳಗ್ಗೆ ತಮಗೆ ಬಂದಿದ್ದ ಕರೆಯ ಸಂದರ್ಭದಲ್ಲಿ ವಿಡಿಯೋ ಮಾಡಿಕೊಂಡು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ತಾಯಿ, ಸಹೋದರಿಯರ ಹೆಸರು ಹಿಡಿದು, ನಿಂದಿಸುವುದು ಆರ್‌ಎಸ್‌ಎಸ್‌ ಸಂಸ್ಕಾರವೇ? ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ಈ ಬೆನ್ನಲ್ಲೇ, ಇಂದು ತಮಗೆ ಬಂದ ಬೆದರಿಕೆ ಕರೆಯಲ್ಲಿ, ಹಿಂದಿಯಲ್ಲಿ ತುಚ್ಛವಾಗಿ ಅರುಹುತ್ತಿರುವ, ಬೈದಿರುವ ವಿಡಿಯೋ ರಿಲೀಸ್‌ ಮಾಡಿ ದಾಖಲೆ ಒದಗಿಸಿದ್ದಾರೆ. Redmi A4 5G (Sparkle Purple, 4GB RAM, 64GB Storage) | Segment Largest 6.88in 120Hz | 50MP Dual Camera | 18W Fast Charging | Charger in The Box

ರೆಕಾರ್ಡ್‌ ಮಾಡಿಕೊಂಡ ವಿಡಿಯೋ ಸೇರಿದಂತೆ, ಅವ್ಯಾಚ ಶಬ್ದಗಳಿಂದ ನಿಂದಿಸಿರುವ ಒಟ್ಟು, 20 ವಿಡಿಯೋಗಳನ್ನು ಶೇರ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಮುಖಾಂತರ, ಇದೆಯೇನು ಆರ್‌ಎಸ್‌ಎಸ್‌ ಸಂಸ್ಕೃತಿ? ನನಗೆ ಕೆಟ್ಟದ್ದಾಗಿ ಬೈದಿರುವ ಇನ್ನೂ ವಿಡಿಯೋಗಳಿವೆ, ನನ್ನ ಮರ್ಯಾದೆ ಉಳಿಸಿಕೊಳ್ಳಲು ಅವುಗಳನ್ನು ಬಹಿರಂಗಪಡಿಸಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತಾಗಿ ಅವರ ಜೀವಹಾನಿ ಭೀತಿಯಿಂದ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿ ಇರುವ ಅವರ ಸರ್ಕಾರಿ ನಿವಾಸದ ಬಳಿ ಸರ್ಕಾರಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರ ಬಿಗಿಭದ್ರತೆ ಒದಗಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮಲ್ಲಿಕಾರ್ಜುನ್‌ ಖರ್ಗೆ ರಾಜ್ಯ ರಾಜಕಾರಣಕ್ಕೆ?; ಬಿಜೆಪಿಯವರು ನವೆಂಬರ್‌ ಕ್ರಾಂತಿಯ ಜಪ ಮಾಡಲಿ! - ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ