ಶಿವಮೊಗ್ಗ: ಇತ್ತೀಚೆಗೆ ನಡೆದ ಶಿವಮೊಗ್ಗ ಜಿಲ್ಲಾ ಸಹಕಾರ ಒಕ್ಕೂಟ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನರಸಿಂಹ ಗಂಧದಮನೆ, ಶಿವಮೊಗ್ಗ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸುರೇಶ್ ನಾಡಿಗ್, ಹಾಗೂ ಮಾರಾಟ ಮಂಡಳಿ ನಿರ್ದೇಶಕ ಕಾಂತರಾಜ್ ಅವರಿಗೆ ಶಿವಮೊಗ್ಗ ನಗರ ಜೆಡಿಎಸ್ ಘಟಕದಿಂದ ಅದ್ಧೂರಿ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ನಗರದ ಪಕ್ಷದ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮತ್ತು ನಗರ ಘಟಕದ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರು ಭಾಗಿ -
ಮಾಜಿ ಶಾಸಕ ಹಾಗೂ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್ ಸೇರಿದಂತೆ ತ್ಯಾಗರಾಜ್, ಸಂಗಯ್ಯ, ಉಮಾಶಂಕರ್ ಉಪಾಧ್ಯಾಯ, ಮಂಜುನಾಥ್, ವಾಜಿದ್ ಸಬ್, ರಘು, ಯುವ ಜೆಡಿಎಸ್ ನಗರ ಅಧ್ಯಕ್ಷ ಸಂಜಯ್ ಕಶ್ಯಪ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದೇ ವೇಳೆ, ನಗರ ಅಧ್ಯಕ್ಷ ದೀಪಕ್ ಸಿಂಗ್ ಮಾತನಾಡಿ, ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಲ್ಪಾವಧಿಯೊಳಗೆ ಹೆಚ್ಚು ಸದಸ್ಯತ್ವ ನೋಂದಣಿ ಮಾಡಲು ಕಾರ್ಯಕರ್ತರು ಅಭಿಯಾನವನ್ನು ತೀವ್ರಗೊಳಿಸಬೇಕು ಎಂದು ಕರೆ ನೀಡಿದರು. ಕಳೆದ ಒಂದು ವರ್ಷದಲ್ಲಿ ನಗರದ 35 ಪ್ರಮುಖ ಜೆಡಿಎಸ್ ಮುಖಂಡರು ವಿವಿಧ ಸಹಕಾರಿ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಪಕ್ಷವು ಈ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿರುವುದನ್ನು ತೋರಿಸುತ್ತದೆ ಎಂದರು. ಈ ಗೆಲುವುಗಳಿಗಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದ ಅವರು, ಮಿತ್ರಪಕ್ಷದ ಬಿಜೆಪಿ ನಾಯಕರಿಗೂ ಧನ್ಯವಾದ ತಿಳಿಸಿದರು. ನಗರ ಜೆಡಿಎಸ್ ಮುಂಬರುವ ಪಾಲಿಕೆ ಚುನಾವಣೆಗಳಿಗೆ ಗಂಭೀರವಾಗಿ ಸಿದ್ಧತೆ ನಡೆಸುತ್ತಿದೆ ಎಂದು ಅವರು ದೃಢಪಡಿಸಿದರು.
ಸನ್ಮಾನ ಸ್ವೀಕರಿಸಿದವರಲ್ಲಿ ನರಸಿಂಹ ಗಂಧದಮನೆ ಅವರು, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ಶಾಸಕ ಚನ್ನಬಸಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಮತ್ತು ನಗರ ಅಧ್ಯಕ್ಷ ದೀಪಕ್ ಸಿಂಗ್ ಅವರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಅವರು ಚುನಾವಣಾ ಅನುಭವಗಳನ್ನು ಹಂಚಿಕೊಂಡರು ಮತ್ತು ನಗರ ಜೆಡಿಎಸ್ ನಾಯಕರ ಅವಿರತ ಪ್ರಯತ್ನಗಳನ್ನು ಸ್ಮರಿಸಿದರು.
ತಾಲೂಕು ಬ್ರಾಹ್ಮಣ ಸಂಘದ ನೂತನ ಅಧ್ಯಕ್ಷರು ಮತ್ತು ಜಿಲ್ಲಾ ಜೆಡಿಎಸ್ ಕಾರ್ಯದರ್ಶಿಯಾಗಿರುವ ಸುರೇಶ್ ನಾಡಿಗ್ ಅವರು, ವಿವಿಧ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. Lava Bold N1 Pro (Stealth Black, 4 GB RAM, 128 GB Storage)| Bigger 6.67" HD+ IP54 Display | 120 Hz Refresh Rate | 50 MP AI Triple Rear Camera | 8 MP Front Camera| 5000 mAh Battery| Charger in Box
ನಗರ ಸಮಿತಿಗೆ ಹೊಸ ನೇಮಕಾತಿ -
ಈ ಸಂದರ್ಭದಲ್ಲಿ ನಗರ ಜೆಡಿಎಸ್ ಸಮಿತಿಗೆ ಹೆಚ್ಚುವರಿ ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಮತಿ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಲಕ್ಷ್ಮಿ, ಕಾರ್ಯದರ್ಶಿಯಾಗಿ ಆಶಾ, ಉಪಾಧ್ಯಕ್ಷರಾಗಿ ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಉಡುಪ, ಪ್ರಧಾನ ಕಾರ್ಯದರ್ಶಿಯಾಗಿ ರುದ್ರೇಶ್ ಮತ್ತು ಕಾರ್ಯದರ್ಶಿಯಾಗಿ ವೆಂಕಟೇಶ್ ಅವರನ್ನು ನೇಮಿಸಲಾಯಿತು. ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು. ನೂರಾರು ನಗರ ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರು ಪಟಾಕಿಗಳ ಮಾರಾಟ, ಮಿತಬಳಕೆಗೆ ಸುಪ್ರೀಂ ಅಸ್ತು!