Skip to main content
ವಿಡಿಯೋ
1/3
politics

RSS ಚಟುವಟಿಕೆ ಬಗ್ಗೆ ವರದಿ ಬಂದ ನಂತರ ನಿರ್ಧಾರ..ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

By Shravanthi R
 RSS ಚಟುವಟಿಕೆ ಬಗ್ಗೆ ವರದಿ ಬಂದ ನಂತರ ನಿರ್ಧಾರ..ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಮೂರ್ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಘೋಷಿಸಿದರು.

ಕಳೆದ ಮೂರ್ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವರದಿ ಬಂದ ನಂತರ ಕಡಿವಾಣದ ಬಗ್ಗೆ ನಿರ್ಧರಿಸಲಾಗುವುದು ಎಂದರು. ಹಾಸನಾಂಬ ದರ್ಶನಕ್ಕಾಗಿ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿದ ಸಂದರ್ಭದಲ್ಲಿ ಸಿಎಂ ಈ ಹೇಳಿಕೆ ನೀಡಿದರು.

ಚುನಾವಣೆ ನಡೆಸಲು ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಪ್ರಸ್ತುತ ಈ ವಿಷಯ ನ್ಯಾಯಾಲಯದ ಪರಿಶೀಲನೆಯಲ್ಲಿದ್ದು, ಕೋರ್ಟ್‌ನಿಂದ ಹಸಿರು ನಿಶಾನೆ ಬಂದ ತಕ್ಷಣವೇ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. realme NARZO 80 Lite 4G (Beach Gold, 4GB+64GB) | 6300mAh Segment's Biggest Battery | 7.94mm Slim Design | 300% Ultra Volume | Pulse Light: 9 Colors, 5 Glow Modes | Ai Assist

ಪ್ರಜಾಪ್ರಭುತ್ವ ಬಲಗೊಳ್ಳಲು ನಿಯಮಿತ ಚುನಾವಣೆಗಳು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದರು. ಮತ್ತೊಂದೆಡೆ, ಅಧಿಕಾರ ಹಂಚಿಕೆಯ ಕುರಿತು ಹೈಕಮಾಂಡ್ ಮೌನವಹಿಸಿರುವ ಸಂದರ್ಭದಲ್ಲಿ ನಡೆಯುತ್ತಿರುವ "ಡಿನ್ನರ್ ಕೂಟಗಳ" ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಡಿನ್ನರ್ ಪಾರ್ಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. ನಾವು ಶಾಸಕರು, ಸಚಿವರು ಆಗಾಗ ಸೇರುತ್ತೇವೆ, ಪಕ್ಷದ ವಿಷಯ ಚರ್ಚಿಸುತ್ತೇವೆ, ಜೊತೆಯಾಗಿ ಊಟ ಮಾಡುತ್ತೇವೆ. ಅದರಲ್ಲಿ ರಾಜಕೀಯ ಅರ್ಥ ಹುಡುಕುವುದು ಬೇಡ, ಎಂದು ಸಿಎಂ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಹಕಾರಿ ಚುನಾವಣಾ ವಿಜೇತರಿಗೆ ಶಿವಮೊಗ್ಗ ಜೆಡಿಎಸ್‌ ವತಿಯಿಂದ ಸನ್ಮಾನ: ಪಕ್ಷ ಸಂಘಟನೆಗೆ ಒತ್ತು ನೀಡುವ ಕುರಿತು ನಗರ ಜೆಡಿಎಸ್‌ ಅಧ್ಯಕ್ಷ ದೀಪಕ್‌ ಸಿಂಗ್‌ ಭರವಸೆ