RSS ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಅವರಿಗೆ ಮೊಬೈಲ್ ಕರೆ ಮಾಡಿ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನಕ್ಕೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ. ಈ ಕಿಡಿಗೇಡಿಯ ಸುಳಿವು ಪತ್ತೆ ಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಲು ಪೊಲೀಸರ ತಂಡ ಸೋಲಾಪುರಕ್ಕೆ ತೆರಳಿದೆ.
ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿದ್ದ ದಾನೇಶ್, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಬೆದರಿಕೆಯನ್ನೂ ಹಾಕಿದ್ದನು. ಈ ಕರೆಯನ್ನು ರೆಕಾರ್ಡ್ ಮಾಡಿದ್ದ ಸಚಿವರು, ಅದನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಬಹಿರಂಗಪಡಿಸಿದ್ದರು.
ಆರಂಭದಲ್ಲಿ ಪ್ರಿಯಾಂಕ್ ಖರ್ಗೆ ದೂರು ನೀಡದಿದ್ದರೂ, ಕಾಂಗ್ರೆಸ್ ಮುಖಂಡ ಮನೋಹರ್ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. Tecno Spark GO 2 (Titanium Grey, 4GB+64GB) | Segment 1st IP64 SGS Certified | Segment's 1st AI with Indian Languages | Segment's 1st No Network Communications* | 120Hz Display | 5000mAh Battery
ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತಿಸಬೇಕು ಎಂದು ಖರ್ಗೆ ಮನವಿ ಮಾಡಿದ್ದರು. ಈ ಹೇಳಿಕೆಯ ನಂತರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆದಿತ್ತು.
ಪ್ರಿಯಾಂಕ್ ಖರ್ಗೆ ಅವರಿಗೆ ಬಂದ ಬೆದರಿಕೆ ಕರೆಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತನಿಖೆಗೆ ಆದೇಶಿಸಿದ್ದರು. ಈಗ ಆರೋಪಿಯ ಗುರುತು ಪತ್ತೆಯಾಗಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಾಂಸಾರಿಕ ಕಲಹದ ಪರಿಣಾಮ: ಕುಡಿತ ಮತ್ತಿನಲ್ಲಿ ಪತಿಯಿಂದ ಪತ್ನಿಯ ಬರ್ಬರ ಹ**ತ್ಯೆ!