Skip to main content
ವಿಡಿಯೋ
1/3
general

ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ - ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿಯ ಬಂಧನ!

By Shravanthi R
ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ - ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿಯ ಬಂಧನ!

ಶಬರಿಮಲೆ ದೇವಸ್ಥಾನದಲ್ಲಿ ನಡೆದ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್‌ ಪೊಟ್ಟಿ, ತಿರುವನಂತಪುರಂನಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧಿತರಾಗಿ, ತನಿಖೆ ನಡೆಸಲಾಗುತ್ತಿದೆ.

ಕೇರಳದ ತಿರುವನಂತಪುರಂನ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಂದು ಬೆಂಗಳೂರು ಮೂಲಕ ಉದ್ಯಮಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ಉನ್ನಿಕೃಷ್ಣನ್‌ ಪೊಟ್ಟಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿ ವಶಕ್ಕೆ ಪಡೆಯಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

ಇಂದು ಮಧ್ಯಾಹ್ನ ಪತ್ತನಂತ್ತಿಟ್ಟದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದೆಂದು ವಿಚಾರಣೆಯ ನಂತರ ಅವರನ್ನು ಎಸ್ಐಟಿ ಕಸ್ಟಡಿಗೆ ಒಪ್ಪಿಸುವಂತೆ ಕೋರಲಾಗಿದೆ. ಕೇರಳದ ಹೈಕೋರ್ಟ್ ನಿರ್ದೇಶನದ ಮೇರೆಗೆ ಎಸ್ಐಟಿ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣಗೊಳಿಸಲು ಆರು ವಾರಗಳ ಗಡುವು ನೀಡಲಾಗಿದೆ. Apple iPhone 15 (128 GB) - Black

ದೇವಾಲಯದ ದ್ವಾರಪಾಲಕ ಮೂರ್ತಿಗಳಲ್ಲಿ ಚಿನ್ನಗಳು ಹಾಗೂ ದೇವಸ್ಥಾನದ ಗರ್ಭಗುಡಿಯ ಬಾಗಿಲಿನಲ್ಲಿ ಇಟ್ಟಿದ್ದ ಚಿನ್ನವೂ ಕಾಣೆಯಾದ ಹಿನ್ನೆಲೆಯಲ್ಲಿ, ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ನಿವಾಸದಲ್ಲಿ ಗುರುವಾರದಂದು ಬಂಧಿಸಲಾಗಿದೆ. ಈ ಹಿಂದೆ ತಿರುವಾಂಕೂರು ದೇವಸ್ವಂ ಮಂಡಳಿಯವರು ಎರಡು ದಿನಗಳ ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ಪಡೆದಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭಾರತೀಯ ಸೇನೆಯ ಶಿಬಿರದ ಮೇಲೆ ಗ್ರೆನೇಡ್‌ ದಾಳಿ - ಮೂವರು ಸೈನಿಕರ ಸ್ಥಿತಿ ಗಂಭೀರ!