ದೇಶದಲ್ಲಿ ಹೆಚ್ಚಾಗುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಜಸ್ಟೀಸ್ ಸೂರ್ಯಕಾಂತ್ ಮತ್ತು ಜಸ್ಟಿಸ್ ಜೋಯ್ಮಲ್ಯಾ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ನಿಟ್ಟಿನಲ್ಲಿ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿಸಲಾಗಿದೆ.
73 ವರ್ಷದ ಮಹಿಳೆಯೊಬ್ಬರು, ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದು, ಕೇಂದ್ರ ಮತ್ತು ಸಿಬಿಐ ಸೇರಿದಂತೆ ಇತರರಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಹರಿಯಾಣದ ವೃದ್ದ ದಂಪತಿಗೆ ನ್ಯಾಯಾಲಯ ಮತ್ತು ತನಿಖಾ ಸಂಸ್ಥೆಗಳ ನಕಲಿ ಆದೇಶದ ಆಧಾರದ ಮೇಲೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 1.5 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದೊಂದು ಕಳವಳಕಾರಿ ಬೆಳವಣಿಗೆಯಾಗಿದೆ, ಇದು ನ್ಯಾಯಾಂಗ ವ್ಯವಸ್ಥೆ ಮೇಲಿನ ಜನರ ನಂಬಿಕೆ ಹಾಗೂ ವಿಶ್ವಾಸದ ಮೇಲಿನ ಹರಿತವಾದ ಪ್ರಹಾರವಾಗಿದೆ ಎಂದು ವಿಶ್ಲೇಷಿಸಿದೆ. Eveready 9W LED Bulb, Cool Day Light (6500K), B22 Base, Energy-Efficient, 4kV Surge Protection, Long-Lasting Durability - Pack of 10
ಈ ಕುರಿತು ದೇಶವೇ ಅಸಮಾಧಾನ ವ್ಯಕ್ತಪಡಿಸಿದೆ. ಕಾನೂನಿಗೆ ಸೆಡ್ಡು ಹೊಡೆಯುವಂತೆ ಮಾಡಿದ ಇಂತಹ ಗಂಭೀರ ಅಪರಾಧ ಕೃತ್ಯವನ್ನು ಸೈಬರ್ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ, ಬದಲಾಗಿ ಇದಕ್ಕೆ ಕಡಿವಾಣ ಹಾಕಲು ಪೋಲಿಸ್ ಹಾಗೂ ಕೇಂದ್ರ ಸಿಬಿಐ ಅಧಿಕಾರಿಗಳು ಕ್ರಮವಿಧಾನವನ್ನು ಸಂಘಟಿತ ಪ್ರಯತ್ನಗಳನ್ನು ಮಾಡಬೇಕೆಂದು ಒತ್ತಿ ತಿಳಿಸಿದೆ. ಶೀಘ್ರವಾಗಿ ಪ್ರಕರಣವನ್ನು ಭೇದಿಸಿ, ದೊಡ್ಡ ಪ್ರಮಾಣದ ನಷ್ಟ ಹಾಗೂ ವಂಚನೆಗೆ ತಾರ್ಕಿಕ ಅಂತ್ಯ ಹಾಡಲು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ - ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿಯ ಬಂಧನ!