ಬೆಂಗಳೂರು: ಕಾಂಗ್ರೆಸ್‌ನ ಕರ್ನಾಟಕ ಘಟಕದ ಅಧಿಕೃತ ಎಕ್ಸ್ ಖಾತೆ ರಾಜ್ಯ ಸರ್ಕಾರದ ಕಾರ್ಯಕ್ಷಮತೆಯನ್ನು ತೋರಿಸುವ ಪೇಮೆಂಟ್ ಸರ್ಟಿಫಿಕೇಟ್ ಎಂಬ ಟ್ವೀಟ್ ಮಾಡಿ, ಬಂಡವಾಳ ಬಯಲಾದ ಬಳಿಕ ಅದನ್ನು ಡಿಲೀಟ್ ಮಾಡಿರುವ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಇದನ್ನೂ ಓದಿ: ಯುವತಿ ಕೊಲೆಗೈದು ಎಸ್ಕೇಪ್ ಆಗಿದ್ದ ವಿಘ್ನೇಶ್ ಈಗ ಪೊಲೀಸರ ಬಲೆಗೆ…!!
ಈ ಟ್ವೀಟ್ನಲ್ಲಿ ಸರ್ಕಾರದ ಯೋಜನೆಗಳ ಯಶಸ್ಸಿನ ಬಗ್ಗೆ ಹೇಳಲಾಗಿತ್ತು ಆದರೆ, ವಿರೋಧ ಪಕ್ಷಗಳ ಟೀಕೆಗೆ ಒಳಗಾದ ಕೂಡಲೇ ಟ್ವೀಟ್ ತೆಗೆದುಹಾಕಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಕ್ಸ್ ಖಾತೆಯಿಂದ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು ಎಂಬ ಟ್ವೀಟ್ ಮಾಡಿ, ವಿವಾದಾತ್ಮಕ ಹೇಳಿಕೆಗೆ ಕಾರಣವಾಗಿದೆ.ಇದನ್ನೂ ಓದಿ: ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ರೈಲು: ಡಿಸೆಂಬರ್ 8 ರಿಂದ ಸಂಚಾರ ಆರಂಭ…!!
ಈ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿಯ ಟ್ವೀಟ್ಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿವೆ.
ಕಾಂಗ್ರೆಸ್‌ನ ಈ ಕೃತ್ಯವು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೊಳಗಾಗಿದ್ದು, ಸರ್ಕಾರದ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಲಾಗಿದೆ. ಈ ಘಟನೆಯಿಂದ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯತಂತ್ರದ ದೌರ್ಬಲ್ಯ ಬಹಿರಂಗವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.SWORNOF Women's Kanjivaram Soft Silk Banarasi Sarees With Unstiched Blouse Piece