ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಆದೇಶವನ್ನು ಹೊರಡಿಸಿದೆ. ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡುತ್ತಾ, ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಮಂಡಳಿ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.
ಮಂಡಳಿಯ ಆದೇಶದ ಪ್ರಕಾರ, ರಾತ್ರಿ 10 ಗಂಟೆಯ ನಂತರ ಯಾವುದೇ ಪಟಾಕಿ ಸಿಡಿಸುವಂತಿಲ್ಲ. ಅಲ್ಲದೆ, ಅಧಿಕ ಹೊಗೆ ಮತ್ತು ನಿಗದಿತ ಡೆಸಿಬಲ್ ಮಟ್ಟಕ್ಕಿಂತ ಹೆಚ್ಚು ಶಬ್ದ ಮಾಡುವ ಎಲ್ಲ ರೀತಿಯ ಪಟಾಕಿಗಳನ್ನೂ ನಿಷೇಧಿಸಲಾಗಿದೆ. ಈ ನಿರ್ಬಂಧಿತ ಅವಧಿಯೊಳಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಲು ಮಂಡಳಿ ಮನವಿ ಮಾಡಿದೆ.
ಅಕ್ಟೋಬರ್ 21 ಮತ್ತು 22 ರಂದು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ. ನಿಯಮಗಳ ಕಟ್ಟುನಿಟ್ಟಿನ ಜಾರಿಗಾಗಿ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ. Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable
ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವವರು ಅಥವಾ ಅಕ್ರಮವಾಗಿ ಸಂಗ್ರಹಿಸಿಡುವವರ ವಿರುದ್ಧ ಪರಿಸರ ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಂಡಳಿಯ ಅಧಿಕಾರಿ ಯಶಸ್ ಅವರು, ನಿಷೇಧಿತ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಸಂಗ್ರಹಣೆಯನ್ನು ತಡೆಯಲು ಅಕ್ಟೋಬರ್ ತಿಂಗಳ ಆರಂಭದಲ್ಲೇ ವಿವಿಧ ಇಲಾಖೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಸಿರು ಪಟಾಕಿಯ ಮಹತ್ವ ಮತ್ತು ಪಟಾಕಿ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಬ್ಬದ ಸಂದರ್ಭದಲ್ಲಿ ವಾಯುಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡುವುದು ಈ ಕ್ರಮಗಳ ಮುಖ್ಯ ಉದ್ದೇಶವಾಗಿದೆ.
ಪಟಾಕಿ ಸಂಗ್ರಹ ಮತ್ತು ಮಾರಾಟ ನಿಷೇಧಿಸಲು, ಹಾಗೂ ಕ್ರಮ ಕೈಗೊಳ್ಳಲು ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಆಯುಕ್ತರು, ಸಾರಿಗೆ ಆಯುಕ್ತರು, ವಾಣಿಜ್ಯ, ಪಶುಸಂಗೋಪನೆ, ಶಿಕ್ಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಮತ್ತು ಅಗ್ನಿಶಾಮಕ ಮಹಾ ನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ.