ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಸಂಸದರು, ಅದರಲ್ಲೂ ವಿಶೇಷವಾಗಿ ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಅವರು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಂಸದರು ಕೇಂದ್ರದ ಬಳಿ ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ (Tejaswi Surya) ಕೂಡ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.
ಬಳಿಕ ಮಾತನಾಡಿದ ಅವರು, ಸಂಸದರು ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರೋ ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಅದಕ್ಕೆ ಕುಮಾರಸ್ವಾಮಿ ಸೇರಿ ಎಲ್ಲ MPಗಳನ್ನು ಸೋಲಿಸಿ ಎಂದು ಸಿಎಂ. ಸಿದ್ದರಾಮಯ್ಯ ಕರೆ ನೀಡಿದರು.
ಪ್ರಧಾನಿ ಮೋದಿಗೆ ಕರ್ನಾಟಕದ ಮೇಲೆ ದ್ವೇಷವಿದೆ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣ ಬರಲ್ಲ. ನಾವು ಕೊಟ್ಟ ತೆರಿಗೆ ಹಣವೂ ವಾಪಸ್ ಕೊಡಲ್ಲ. ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ. ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಟಾಂಗ್ ಕೊಟ್ಟರು.