Skip to main content
ವಿಡಿಯೋ
1/3
general

ರೇಣುಕಾಸ್ವಾಮಿ ಪ್ರಕರಣ: ಆರೋಪಿ ಪ್ರದೂಷ್‌ಗೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ, ವಿಚಾರಣೆ ಮಧ್ಯಾಹ್ನ 3 ಕ್ಕೆ ಮುಂದೂಡಿಕೆ

By Shravanthi R
ರೇಣುಕಾಸ್ವಾಮಿ ಪ್ರಕರಣ: ಆರೋಪಿ ಪ್ರದೂಷ್‌ಗೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ, ವಿಚಾರಣೆ ಮಧ್ಯಾಹ್ನ 3 ಕ್ಕೆ ಮುಂದೂಡಿಕೆ

ಪ್ರದೂಷ್ ಪರ ವಕೀಲ ದಿವಾಕರ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರದೂಷ್ ತಂದೆಗೆ ಇರುವ ಒಬ್ಬನೇ ಮಗನಾಗಿರುವುದರಿಂದ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮತ್ತು ಗ್ಯಾಂಗ್ ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಬಂಧಿತನಾಗಿರುವ ಆರೋಪಿ ಪ್ರದೂಷ್, ತನ್ನ ತಂದೆಯ ಅಂತ್ಯಕ್ರಿಯೆ ಮತ್ತು ವಿಧಿವಿಧಾನಗಳಲ್ಲಿ ಭಾಗವಹಿಸಲು 15 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಪ್ರದೂಷ್ ಪರ ವಕೀಲ ದಿವಾಕರ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರದೂಷ್ ತಂದೆಗೆ ಇರುವ ಒಬ್ಬನೇ ಮಗನಾಗಿರುವುದರಿಂದ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಈ ಮನವಿಗೆ ವಿಶೇಷ ಸರ್ಕಾರಿ ಅಭಿಯೋಜಕರು (SPP) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ ಎಂದು ತಿಳಿಸಲಾಗಿದೆ.

ಪ್ರಕರಣದ ವಿಚಾರಣೆ ವಿಳಂಬ ವಿರೋಧಿಸಿ ಎಸ್‌ಪಿಪಿ ಮೆಮೊ ಸಲ್ಲಿಕೆ -

ದಿನೇ ದಿನೇ ಪ್ರಕರಣಕ್ಕೆ ಸಂಬಂಧಿಸಿ ಬೆಳವಣಿಗೆಗಳು ಕಂಡುಬಂದಿದ್ದು, SPP ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ, ಆರೋಪಿಗಳು ಉದ್ದೇಶಪೂರ್ವಕವಾಗಿ ವಿಚಾರಣೆಯನ್ನು (ಟ್ರಯಲ್) ವಿಳಂಬಗೊಳಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. R for Rabbit Little Genius Picasso Kids Study Table Set with Chair, 3 in 1 Multipurpose Activity Table Set for 3-7 Years Kids, Upto 40kgs Weight Capacity (White Grey)

ಆರೋಪಿಗಳು ಉದ್ದೇಶಪೂರ್ವಕವಾಗಿ ಡಿಸ್ಚಾರ್ಜ್ ಅರ್ಜಿಗಳನ್ನು ಸಲ್ಲಿಸುವ ಮೂಲಕ ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಆಗ್ರಹಿಸಿ, ಆದಷ್ಟು ಬೇಗ ವಿಚಾರಣೆ ಮುಗಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿದ್ದರೂ, ಕೋರ್ಟ್ ಸಮಯ ವ್ಯರ್ಥವಾಗುತ್ತಿದೆ ಎನ್ನಲಾಗಿದೆ.

ಡಿಸ್ಚಾರ್ಜ್ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಆರೋಪಿಗಳಿಗೆ ಒಟ್ಟಿಗೆ ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದ್ದರೂ, ಒಬ್ಬರ ನಂತರ ಮತ್ತೊಬ್ಬರು ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಹೀಗಾಗಿ, ಕಳೆದ ಎರಡು ತಿಂಗಳಿಂದ ನ್ಯಾಯಾಲಯದ ಸಮಯವನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪಿಸಿದ್ದಾರೆ.

ಈ ವಿಳಂಬ ಪ್ರಕ್ರಿಯೆಯನ್ನು ವಿರೋಧಿಸಿ, ನ್ಯಾಯಾಲಯ ಆದಷ್ಟು ಬೇಗ ಪ್ರಕರಣದ ವಿಚಾರಣೆಯನ್ನು ಆರಂಭಿಸುವಂತೆ ಎಸ್ಪಿಪಿ ಮನವಿ ಮಾಡಿದ್ದಾರೆ. ಕಳೆದ ಎರಡು ತಿಂಗಳುಗಳಲ್ಲಿ ನಡೆದಿರುವ ವಿಳಂಬ ಪ್ರಕ್ರಿಯೆಗಳ ಕುರಿತು ಮೆಮೊದಲ್ಲಿ ಉಲ್ಲೇಖಿಸಲಾಗಿದ್ದು, ತ್ವರಿತ ವಿಚಾರಣೆಗೆ ಒತ್ತಾಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ; HD. ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಸಲಿರುವ ಹೈಕೋರ್ಟ್‌