ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ನಡೆದ ಖಾಸಗಿ ಬಸ್ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ದುಃಖ ವ್ಯಕ್ತಪಡಿಸಿದರು. ಈ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದರು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: ಠಾಕೂರ್ ಪರಂಪರೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ಖಚಿತ: ಆರ್‌ಜೆಡಿ-ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಾಮಂಡಲ..!
ಕಳೆದ ವಾರ ಕೂಡ ಇದೇ ರೀತಿ ಖಾಸಗಿ ಬಸ್ ದುರಂತ ಸಂಭವಿಸಿತ್ತು. ಇಂತಹ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಡಿಕೆಶಿ ಆಗ್ರಹಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಡಿಕೆಶಿ ಮೌನ ಮುರಿದರು. ಆ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ.ಇದನ್ನೂ ಓದಿ: ಕರ್ನೂಲ್ ಬಳಿ ಅಪಘಾತ; ಟ್ರಾವೆಲ್ಸ್ ಕಛೇರಿಗೆ ಬೀಗ, ಆನ್‌ಲೈನ್ ಬುಕ್ಕಿಂಗ್ ನಿಂದ ವ್ಯವಹಾರ
ಯಾರ ಬಳಿ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಈ ಮೂಲಕ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ಮತ್ತು ಉತ್ತರಾಧಿಕಾರಿ ಚರ್ಚೆಗಳ ಕುರಿತು ನೇರ ಪ್ರತಿಕ್ರಿಯೆ ನೀಡುವುದರಿಂದ ಅವರು ದೂರ ಉಳಿದರು.SGF11 Women's Kanjivaram Pure Soft Silk Saree For Women Pure Golden Zari With Blouse Piece