ಕೇರಳ: ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವ ಶಿಕ್ಷಣ ಇಲಾಖೆಯ ಅಧಿಕೃತ ನಿರ್ದೇಶನವನ್ನು ಪ್ರಶ್ನಿಸಿ ಸೇಂಟ್ ರಿಟಾ ಪಬ್ಲಿಕ್ ಶಾಲೆಯ ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ [ಮ್ಯಾನೇಜರ್, ಸೇಂಟ್ ರಿಟಾ ಪಬ್ಲಿಕ್ ಸ್ಕೂಲ್ vs ಕೇರಳ ಮತ್ತು ಇತರರು].PALAY® Straw Hat Sun Hats for Women,Wide Brim Cap Beach Hat for Women Stylish UV Protection Cap,
ಎಂಟನೇ ತರಗತಿಯ ವಿದ್ಯಾರ್ಥಿನಿಯು ತನ್ನ ವಕೀಲರ ಮೂಲಕ ನ್ಯಾಯಮೂರ್ತಿ ವಿ ಜಿ ಅರುಣ್ ಅವರಿಗೆ ತಾನು ಆ ಶಾಲೆಯಲ್ಲಿ ತನ್ನ ಅಧ್ಯಯನವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಮತ್ತು ಈ ವಿಷಯವನ್ನು ಹೆಚ್ಚು ಬೆಳೆಸಲು ಬಯಸುವುದಿಲ್ಲ ಎಂದು ತಿಳಿಸಿದ ನಂತರ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿತು. ಅರ್ಜಿ ದಾಖಲಿಸಿದ್ದ ಸಿಬಿಎಸ್ಇ-ಸಂಯೋಜಿತ ಶಾಲೆಯು ಎರ್ನಾಕುಲಂನ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಇ) ವಿದ್ಯಾರ್ಥಿಯ ಪರವಾಗಿ ನೀಡಿದ್ದ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿತ್ತು.ಇದನ್ನು ಓದಿ; ಚಿತ್ತಾಪುರದಲ್ಲಿ RSS ಪಥಸಂಚಲನ: ಅ.28ಕ್ಕೆ ಶಾಂತಿಸಭೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
"ಅಂತಿಮವಾಗಿ ವಿವೇಕವು ಜಯ ಸಾಧಿಸಿದೆ ಹಾಗೂ ಸಂವಿಧಾನದ ಅಡಿಪಾಯಗಳಲ್ಲಿ ಒಂದಾದ ಭ್ರಾತೃತ್ವವು ದೃಢವಾಗಿದೆ ಎಂದು ತಿಳಿಸಲು ಈ ನ್ಯಾಯಾಲಯವು ಹರ್ಷಿಸುತ್ತದೆ. ಆ ರೀತ್ಯಾ ಅರ್ಜಿಯನ್ನು ಮುಕ್ತಾಯಗೊಳಿಸಲಾಗಿದೆ" ಎಂದು ನ್ಯಾಯಮೂರ್ತಿಗಳು ತಿಳಿಸಿದರು. "ವಿದ್ಯಾರ್ಥಿನಿ ತನ್ನ ಸ್ವಂತ ಇಚ್ಛೆಯಿಂದ ಶಾಲೆಯನ್ನು ತೊರೆಯುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿಯು ಆಕೆಯನ್ನು ಶಾಲೆಯಿಂದ ಹೊರಗೆ ತಳ್ಳಿದೆ ಎಂದು ಭಾವಿಸಲಾಗದು" ನ್ಯಾಯಮೂರ್ತಿಗಳು ಮೌಖಿಕವಾಗಿ ಹೇಳಿದರು.