ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಎರಡು ವರ್ಷಗಳ ಬಳಿಕ ಸಂಪುಟ ಪುನಃರಚನೆ ಆಗುತ್ತಿದೆ. ಸರ್ಕಾರ ಬಂದ ಮೇಲೆ ಸಂಪುಟದಿಂದ ಹೊರಗೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರವಾಗಿದೆ. ಇದಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದೆ. ಸಚಿವ ಸಂಪುಟ ಪುನರ್ ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಸಂತೃಪ್ತ