Skip to main content
ವಿಡಿಯೋ
1/3
politics

ನಾಳೆ ದ.ಕ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

By Shravanthi R
ನಾಳೆ ದ.ಕ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಭೇಟಿ ನೀಡಲಿದ್ದು, ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ(ಅ. 27) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಶೇಷ ವಿಮಾನದಲ್ಲಿ ಆಗಮಿಸಿ, 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ - 2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸಲಿದ್ದಾರೆ.

ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 7.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ ಎನ್ನಲಾಗಿದೆ. ESR Upgraded for MagSafe Wallet,5 Card Holder with Adjustable Stand,RFID-Blocking,Secure Grip,Magnetic Wallet for iPhone 17/16/15/14/13/12,Google Pixel 10/Pro/Pro XL,Not for Mini,Not Find My,Black

ಸಿಎಂ ಆಗಮನಕ್ಕೂ ಮೊದಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ದ.ಕ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.55 ಕ್ಕೆ ವಿಮಾನ ನಿಲ್ದಾಣಕ್ಕೆ ಬಂದು, 10.30ಕ್ಕೆ ಕುಂಜತ್ತಬೈಲ್ ಮುಡಾ ಲೇಔಟ್ ಪರಿಶೀಲನೆ, 11.45ಕ್ಕೆ ಉರ್ವ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ, ಮಧ್ಯಾಹ್ನ 12.45 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ, 3.30ಕ್ಕೆ ಮುಖ್ಯಮಂತ್ರಿಗಳೊಂದಿಗೆ ಬ್ಯಾಡ್ಮಿಂಟನ್ ಪಂದ್ಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ತೊರೆಯಲು ಸಿದ್ದ - ಸಚಿವ ಕೃಷ್ಣ ಬೈರೇಗೌಡ ಹೇಳಿಕೆ!