Skip to main content
ವಿಡಿಯೋ
1/3
general

ಉದ್ಯಮ ವಲಯದ ಸಮಸ್ಯೆಗಳಿಗೆ ಪರಿಹಾರಕ್ಕೆ ಎಫ್‌ಕೆಸಿಸಿಐ ಶ್ರಮ: ಯುವ ಉದ್ಯಮಿಗಳಿಗೆ ಪ್ರೋತ್ಸಾಹ..!!

By Pavitra Ganapathi Baradavalli
ಉದ್ಯಮ ವಲಯದ ಸಮಸ್ಯೆಗಳಿಗೆ ಪರಿಹಾರಕ್ಕೆ ಎಫ್‌ಕೆಸಿಸಿಐ ಶ್ರಮ: ಯುವ ಉದ್ಯಮಿಗಳಿಗೆ ಪ್ರೋತ್ಸಾಹ..!!

ಉದ್ಯಮ ವಲಯವನ್ನು ಕಾಡುತ್ತಿರುವ ಸಮಸ್ಯೆಗಳನ್ನು, ವಿಶೇಷವಾಗಿ ಮೂಲಸೌಕರ್ಯ ಕೊರತೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವ ಕಾರ್ಯವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಮಾಡುತ್ತಿದೆ ಎಂದು ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.

ಮಡಿಕೇರಿ: ಉದ್ಯಮ ವಲಯವನ್ನು ಕಾಡುತ್ತಿರುವ ಸಮಸ್ಯೆಗಳನ್ನು, ವಿಶೇಷವಾಗಿ ಮೂಲಸೌಕರ್ಯ ಕೊರತೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವ ಕಾರ್ಯವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಮಾಡುತ್ತಿದೆ ಎಂದು ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.ಇದನ್ನೂ ಓದಿ: NDAಯಲ್ಲಿ ನಿಂದನೀಯ ಭಾಷೆ ಮಾತ್ರ; ಐದು ವರ್ಷಗಳ ಯೋಜನೆಗಳನ್ನು ಹೇಳಿ, ತೇಜಸ್ವಿ ಕಿಡಿ..!

ವಿಷನ್ ಸ್ಟೇಟ್ಮೆಂಟ್ 2025–26ನ್ನು ಶನಿವಾರ ಕ್ಲಬ್ ಮಹೀಂದ್ರ ಹೋಟೆಲ್ನಲ್ಲಿ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್ಕೆಸಿಸಿಐ ಉದ್ಯಮಿಗಳು ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಇತ್ತೀಚೆಗೆ ರಸ್ತೆಗುಂಡಿ ಸಮಸ್ಯೆಯನ್ನು ಪ್ರಸ್ತಾಪಿಸಿದಾಗ, ಮುಖ್ಯಮಂತ್ರಿಯವರು ಉನ್ನತ ಮಟ್ಟದ ಸಭೆ ನಡೆಸಿದರು. ಇಂತಹ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ, ಎಂದು ಹೇಳಿದರು.ಇದನ್ನೂ ಓದಿ: ಪುಷ್ಪ ಸಿನಿಮಾ ಶೈಲಿಯಲ್ಲಿ ಶ್ರೀಗಂಧ ಕಳ್ಳತನ: ಈರುಳ್ಳಿ ಮೂಟೆಯಲ್ಲಿ ಸ್ಮಗ್ಲಿಂಗ್, ನಾಲ್ವರ ಬಂಧನ..!!

ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೊಡಗು, ಚಿಕ್ಕಮಗಳೂರು, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಲಯಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಉದ್ಯಮಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುವೆ, ಎಂದು ಭರವಸೆ ನೀಡಿದರು.ಇದನ್ನೂ ಓದಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ: ಶಿಕಾರಿಪುರ ಮಾಜಿ ಶಾಸಕನನ್ನು ತಿವಿದು ಕೆಳಗೆ ಎಸೆದ ಹೋರಿ

ರಾಜ್ಯದಲ್ಲಿ 10 ಲಕ್ಷ ಉದ್ಯಮಿಗಳನ್ನು ಸೃಷ್ಟಿಸುವ ಗುರಿಯನ್ನು ಎಫ್ಕೆಸಿಸಿಐ ಹೊಂದಿದೆ. ಇದಕ್ಕಾಗಿ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು, ವಿದ್ಯಾರ್ಥಿಗಳಿಂದ ಬಿಸಿನೆಸ್ಪ್ಲ್ಯಾನ್ಆಹ್ವಾನಿಸಿ, ಉತ್ತಮ ಯೋಜನೆಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಇದರಿಂದ ಯುವ ಸಮುದಾಯವನ್ನು ಉದ್ಯಮ ವಲಯಕ್ಕೆ ಸೆಳೆಯಲಾಗುವುದು ಎಂದು ಉಮಾ ರೆಡ್ಡಿ ತಿಳಿಸಿದರು.ಇದನ್ನೂ ಓದಿ: ತೇಜಸ್ವಿ ಯಾದವ್ ಸಣ್ಣ ಕಾರ್ಮಿಕರಿಗೆ ₹5 ಲಕ್ಷ ಸಹಾಯ: ಸ್ವಯಂ ಉದ್ಯೋಗಕ್ಕೆ ದೊಡ್ಡ ಘೋಷಣೆ ..!

ನವೆಂಬರ್ 19ರಂದು ಬೆಂಗಳೂರಿನ ಸರ್ಎಂವಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆಯನ್ನು ಆಯೋಜಿಸಲಾಗಿದೆ. ಸಂದರ್ಭದಲ್ಲಿ ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಮತ್ತು ಸಂವಾದಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.ಇದನ್ನೂ ಓದಿ: ದತ್ತಪೀಠದ ಗೋರಿಗಳ ವಿವಾದ: ಗ್ರಾಮ ಪಂಚಾಯಿತಿಯ ಉತ್ತರದಿಂದ ಹಿಂದೂ ಸಂಘಟನೆಗಳಿಗೆ ಬಲ, ಹೋರಾಟಕ್ಕೆ ಹೊಸ ತಿರುವು..!!

ರಾಜ್ಯದ ಉದ್ಯಮಿಗಳ ಪೈಕಿ ಶೇ.90ರಷ್ಟು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದವರಾಗಿದ್ದಾರೆ. ಇವರಿಗಾಗಿ ಪ್ರತ್ಯೇಕ ನೀತಿ ರೂಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಮ್ ಪ್ರಸಾದ್ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಗಿರೀಶ್ ಗಣಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.INDO ERA Women's Embroidered Pure Cotton Kurta Pant With Dupatta Set (Kh0Ph6072)