Skip to main content
ವಿಡಿಯೋ
1/3
crime

ಆನೇಕಲ್‌ನಲ್ಲಿ ಭಯಾನಕ ರಸ್ತೆ ಅಪಘಾತ: ಕಂಟೈನರ್ ಲಾರಿ ಕಂದಕಕ್ಕೆ ಉರುಳಿ ಇಬ್ಬರು ಸಾವು, ನಾಲ್ವರಿಗೆ ಗಾಯ..!!

By Pavitra Ganapathi Baradavalli
ಆನೇಕಲ್‌ನಲ್ಲಿ ಭಯಾನಕ ರಸ್ತೆ ಅಪಘಾತ: ಕಂಟೈನರ್ ಲಾರಿ ಕಂದಕಕ್ಕೆ ಉರುಳಿ ಇಬ್ಬರು ಸಾವು, ನಾಲ್ವರಿಗೆ ಗಾಯ..!!

ಆನೇಕಲ್ ತಾಲ್ಲೂಕಿನ ಉರಗನದೊಡ್ಡಿ ಗ್ರಾಮದ ಬಳಿಯ ಇಳಿಜಾರು ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.

ಬೆಂಗಳೂರು: ಆನೇಕಲ್ ತಾಲ್ಲೂಕಿನ ಉರಗನದೊಡ್ಡಿ ಗ್ರಾಮದ ಬಳಿಯ ಇಳಿಜಾರು ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ದುರಂತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ: ಹುಟ್ಟಿದ ದಿನವೇ ಜೀವ ಕಳೆದುಕೊಂಡ ದುರ್ವಿಧಿ - ಕಿರುತೆರೆ ನಟನ ಅಂಗಾಂಗ ದಾನ!

ಮೃತರ ದೇಹಗಳು ಕಂಟೈನರ್ ಕೆಳಗೆ ಸಿಲುಕಿಕೊಂಡಿದ್ದವು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ದೇಹಗಳನ್ನು ಹೊರತೆಗೆಯಲಾಯಿತು. ಗಾಯಾಳುಗಳನ್ನು ತಕ್ಷಣವೇ ಆನೇಕಲ್ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಇದನ್ನೂ ಓದಿ: ಉದ್ಯಮ ವಲಯದ ಸಮಸ್ಯೆಗಳಿಗೆ ಪರಿಹಾರಕ್ಕೆ ಎಫ್‌ಕೆಸಿಸಿಐ ಶ್ರಮ: ಯುವ ಉದ್ಯಮಿಗಳಿಗೆ ಪ್ರೋತ್ಸಾಹ..!!

ಲಾರಿಯಲ್ಲಿ ಚಾಲಕ ಮತ್ತು ಸಹಾಯಕ ಸೇರಿ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇಳಿಜಾರಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಜಿಗಣಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: NDAಯಲ್ಲಿ ನಿಂದನೀಯ ಭಾಷೆ ಮಾತ್ರ; ಐದು ವರ್ಷಗಳ ಯೋಜನೆಗಳನ್ನು ಹೇಳಿ, ತೇಜಸ್ವಿ ಕಿಡಿ..!

ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿವೆ. ರಸ್ತೆಯ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.INDO ERA Women's Embroidered Pure Cotton Kurta Pant With Dupatta Set (Kh0Ph6072)