Skip to main content
ವಿಡಿಯೋ
general

ಒಂದೇ ತಿಂಗಳಲ್ಲಿ ಬೀದಿ ನಾಯಿಗಳ ದಾಳಿಗೆ 18 ಜಿಂಕೆಗಳು ಬಲಿ..!

By Vinutha U
ಒಂದೇ ತಿಂಗಳಲ್ಲಿ ಬೀದಿ ನಾಯಿಗಳ ದಾಳಿಗೆ 18 ಜಿಂಕೆಗಳು ಬಲಿ..!

ಅರಣ್ಯಕ್ಕೆ ಪ್ರವೇಶಿಸುವವರ ಮೇಲೆ ಮೊಕದ್ದಮೆ ದಾಖಲಿಸುವ ಅರಣ್ಯ ಇಲಾಖೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಾಣಿ ಹಿಂಸೆಯಾಗುತ್ತಿದ್ದರೂ ಕೂಡ ಮೌನವಾಗಿರುವುದು ಯಾಕೆ? ಬೀದಿನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಪುನರ್‌ವಸತಿ ಕೇಂದ್ರವನ್ನು ತೆರೆಯುವಂತಾಗಬೇಕೆಂದು ಸಲಹೆ ನೀಡಿದ್ದಾರೆ.

ಸುಂಟಿಕೊಪ್ಪ (ಕೊಡಗು) (.27): ಬೀದಿನಾಯಿಗಳ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಜಿಂಕೆಯೊಂದು ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಇದರೊಂದಿಗೆ ಬೀದಿ ನಾಯಿಗಳಿಗೆ ಒಂದೇ ತಿಂಗಳಿನಲ್ಲಿ 18 ಜಿಂಕೆಗಳು ಬಲಿ ಆಗಿವೆ. ತೊಂಡೂರಿನಲ್ಲಿ ಸತತವಾಗಿ ಬೀದಿ ನಾಯಿಗಳಿಂದ ಜಿಂಕೆಗಳು ಬೇಟೆಗೆ ಒಳಗಾಗುತ್ತಿವೆ.

 

ಭಾನುವಾರ ಬೆಳಗ್ಗೆ ಅಟ್ಟಡಿಸಿಕೊಂಡು ಬಂದ ನಾಯಿಗಳಿಂದ ತಪ್ಪಿಸಿಕೊಳ್ಳಲು ಜಿಂಕೆಯೊಂದು ಮುಖ್ಯ ರಸ್ತೆಯಲ್ಲಿರುವ ರಾಧಕೃಷ್ಣಪ್ಪ ಎಂಬುವರ ಮನೆಗೆ ನುಗ್ಗಿದೆ. ಮನೆಯ ಹಾಲ್ನಲ್ಲಿ ಪ್ರಾಣ ರಕ್ಷಣೆಗಾಗಿ ಓಡಾಡಿದ ಜಿಂಕೆ, ಹೊರ ಬಂದು ರಸ್ತೆ ದಾಟುವಾಗ ಮತ್ತೆ ನಾಯಿಗಳ ದಾಳಿಗೆ ಒಳಗಾಗಿ ಪ್ರಾಣ ಬಿಟ್ಟಿದೆ. ವಿಷಯ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿ ಜಿಂಕೆಯ ಮೃತದೇಹವನ್ನು ತೆಗೆದುಕೊಂಡು ಹೋಗಿದ್ದಾರೆ. ಇದು ಹೆಣ್ಣು ಜಿಂಕೆಯಾಗಿದ್ದು, ಅಂದಾಜು 12 ವರ್ಷವಾಗಿರಬಹುದು. https://dv7jujfts4bjf.cloudfront.net/Untitled design - 2025-10-24T080142.136.png_2025-10-24T02:32:24.619Z

 

ಜಿ,ಪಂ ಮಾಜಿ ಸದಸ್ಯ ಆರ್.ಕೆ.ಚಂದ್ರು ಮಾತನಾಡಿ, ತಿಂಗಳಲ್ಲಿ ಸರಿಸುಮಾರು 18 ಜಿಂಕೆಗಳು ಬೀದಿನಾಯಿ ದಾಳಿಗೆ ತುತ್ತಾಗಿ ಸಾವನ್ನಪ್ಪಿವೆ. ಬೀದಿ ನಾಯಿಗಳ ಹಾವಳಿಯನ್ನು ಗ್ರಾಮ ಪಂಚಾಯಿತಿ ನಿಯಂತ್ರಿಸಬೇಕಾಗಿದೆ. ಶನಿವಾರವೂ ಕೂಡ ಹಾಡಹಗಲೇ ಗರ್ಭಿಣಿ ಜಿಂಕೆಯೊಂದನ್ನು ನಾಯಿಗಳು ಬೇಟೆಯಾಡಿತ್ತು. ಅರಣ್ಯಕ್ಕೆ ಪ್ರವೇಶಿಸುವವರ ಮೇಲೆ ಮೊಕದ್ದಮೆ ದಾಖಲಿಸುವ ಅರಣ್ಯ ಇಲಾಖೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಾಣಿ ಹಿಂಸೆಯಾಗುತ್ತಿದ್ದರೂ ಕೂಡ ಮೌನವಾಗಿರುವುದು ಯಾಕೆ? ಬೀದಿನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಪುನರ್ವಸತಿ ಕೇಂದ್ರವನ್ನು ತೆರೆಯುವಂತಾಗಬೇಕೆಂದು ಸಲಹೆ ನೀಡಿದ್ದಾರೆ.