Skip to main content
ವಿಡಿಯೋ
1/3
politics

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಡಿ.ಕೆ ಶಿವಕುಮಾರ್‌ ತಟಸ್ಥ ನಿಲುವು ತಗೊಂಡ್ರಾ..ಹೀಗೇಳಿದ್ಯಾಕೆ?

By Pavitra Ganapathi Baradavalli
 ಸಿಎಂ ಹೇಳಿದ ಮೇಲೆ ಇನ್ನೇನಿದೆ? ಡಿ.ಕೆ ಶಿವಕುಮಾರ್‌ ತಟಸ್ಥ ನಿಲುವು ತಗೊಂಡ್ರಾ..ಹೀಗೇಳಿದ್ಯಾಕೆ?

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮದ ಪ್ರಶ್ನೆಗಳಿಗೆ ತಟಸ್ಥ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರು ಹೇಳಿದ ನಂತರ ಯಾವುದೇ ವಿವಾದ ಬೇಡ, ಮತ್ತು ಹೈಕಮಾಂಡ್ ಭೇಟಿಯ ಬಗ್ಗೆ ತಮ್ಮ ಮಾತನ್ನು ಮೀರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಟಸ್ಥ ನಿಲುವು ಪ್ರದರ್ಶಿಸಿದ್ದಾರೆ. ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸೋಮವಾರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಹೈಕಮಾಂಡ್ ಒಪ್ಪಿದರೆ ತಾವೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ಅಂಗಡಿಗೆ ನುಗ್ಗಿ ಸಿಗರೇಟ್, ಹಣಕ್ಕಾಗಿ ಕಳ್ಳನ ಹುಡುಕಾಟ; ಸಿಸಿಟಿವಿಯಲ್ಲಿ ಚಲನವಲನ ರೆಕಾರ್ಡ್‌

ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ನಿಧನರಾದ ಪತಿಯವರಿಗೆ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು. ತಿಹಾರ್ ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿಯವರೊಂದಿಗೆ ಅಂಬಿಕಾ ಸೋನಿ ಭೇಟಿ ಮಾಡಿದ್ದನ್ನು ನೆನಪಿಸಿಕೊಂಡರು.

ಅಲ್ಲದೆ, ನನಗೂ ಅವರಿಗೂ ಬಹಳ ಆತ್ಮೀಯತೆ ಇದೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಇದನ್ನೂ ಓದಿ: ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ತಿರುವು..!

ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಹೋಗಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ದೆಹಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ಮಾಧ್ಯಮದವರು, ಸಾರ್ವಜನಿಕರು ಅಥವಾ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತನಾಡಲಿ. ನನಗದು ಸಂಬಂಧ ಪಡದ ವಿಷಯ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.SGF11 Women's Kanjivaram Pure Soft Silk Saree For Women Pure Golden Zari With Blouse Piece