Skip to main content
ವಿಡಿಯೋ
1/3
politics

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಮೇಲ್ಮನವಿ ಇಂದು ವಿಚಾರಣೆ ನಡೆಸಲಿರುವ ಹೈಕೋರ್ಟ್‌…!!

By Pavitra Ganapathi Baradavalli
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಮೇಲ್ಮನವಿ ಇಂದು ವಿಚಾರಣೆ ನಡೆಸಲಿರುವ ಹೈಕೋರ್ಟ್‌…!!

ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಮಹತ್ವದ ಕ್ರಿಮಿನಲ್ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ.

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ರೇವಣ್ಣ ಅವರಿಗೆ ಸಂಬಂಧಿಸಿದ ಮಹತ್ವದ ಕ್ರಿಮಿನಲ್ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ.ಇದನ್ನೂ ಓದಿ: ಬಿಗ್‌ಬಾಸ್‌ ಹನುಮಂತುಗೆ ಕಿತ್ತೂರು ಉತ್ಸವದಲ್ಲಿ ನಿಜವಾಗ್ಲೂ ಅವಮಾನ ಆಯ್ತಾ? ಹನುಮಂತು ಹಾಡು ನಿಲ್ಲಿಸಿದ್ದೇಕೆ?

ಪ್ರಕರಣದ ವಿಚಾರಣೆ ನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ನಡೆಯಲಿದೆ. ಪ್ರಜ್ವಲ್ರೇವಣ್ಣ ಅವರು ತಮ್ಮ ವಿರುದ್ಧದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿದ್ದಾರೆ.

ಹಿಂದೆ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.ಇದನ್ನೂ ಓದಿ: ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಹಣ ಕಾರವಾರದಲ್ಲಿ ಜಪ್ತಿ..!


ಆದೇಶದ ವಿರುದ್ಧ ಪ್ರಜ್ವಲ್ರೇವಣ್ಣ ಹೈಕೋರ್ಟ್ನಲ್ಲಿ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರಕರಣದ ಮೇಲ್ಮನವಿ ವಿಚಾರಣೆಯು ಇಂದು ನ್ಯಾಯಾಲಯದಲ್ಲಿ ನಡೆಯಲಿದ್ದು, ಪ್ರಕರಣದ ಮುಂದಿನ ಬೆಳವಣಿಗೆಯ ಬಗ್ಗೆ ಎಲ್ಲರು ಕುತೂಹಲರಾಗಿದ್ದಾರೆ.SGF11 Women's Kanjivaram Pure Soft Silk Saree For Women Pure Golden Zari With Blouse Piece