Skip to main content
ವಿಡಿಯೋ
1/3
politics

ಸಿದ್ದರಾಮಯ್ಯ ಸಿಎಂ ಆಗಿರುವುದು ಅನಿವಾರ್ಯ: ಯತೀಂದ್ರ ಸಿದ್ದರಾಮಯ್ಯ ..!!

By Pavitra Ganapathi Baradavalli
ಸಿದ್ದರಾಮಯ್ಯ ಸಿಎಂ ಆಗಿರುವುದು ಅನಿವಾರ್ಯ: ಯತೀಂದ್ರ ಸಿದ್ದರಾಮಯ್ಯ ..!!

ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ರಾಜ್ಯಕ್ಕೆ ಸಿದ್ದರಾಮಯ್ಯ ಸಿಎಂ ಆಗಿರುವುದು ಅನಿವಾರ್ಯ.

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂಬ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ, ರಾಜ್ಯಕ್ಕೆ ಸಿದ್ದರಾಮಯ್ಯ ಸಿಎಂ ಆಗಿರುವುದು ಅನಿವಾರ್ಯ.ಇದನ್ನೂ ಓದಿ: ಟ್ರಂಪ್ ನನ್ನ ಅಪ್ಪ, ಬೇಕಾದರೆ ರಕ್ತ ಪರೀಕ್ಷೆ ಮಾಡಿ; ಏನಿದು ರಾಖಿಯ ಹೊಸ ವರಸೆ?


ಬಹುತೇಕ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಸಿದ್ದರಾಮಯ್ಯ ಅವರೇ ಮುಂದುವರಿಯಬೇಕು ಎಂದು ಬಯಸಿದ್ದಾರೆ ಎಂದು ಹೇಳಿದರು. ಇದರೊಂದಿಗೆ ರಾಜಣ್ಣ ಹೇಳಿಕೆ ಸಂಪೂರ್ಣ ಸರಿ ಎಂದು ಸಮ್ಮತಿ ಸೂಚಿಸಿದರು. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದರೆ ನಾನೇ ಪೂರ್ಣಾವಧಿ ಸಿಎಂ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನನಗಾಗಲೀ, ತಂದೆಯವರಿಗಾಗಲೀ ಇದರ ಬಗ್ಗೆ ಗೊತ್ತಿಲ್ಲ.ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಮೇಲ್ಮನವಿ ಇಂದು ವಿಚಾರಣೆ ನಡೆಸಲಿರುವ ಹೈಕೋರ್ಟ್‌…!!


ಯಾರೇ ಸಿಎಂ ಆಗಲಿ ಅಥವಾ ಸಿದ್ದರಾಮಯ್ಯ ಮುಂದುವರಿಯಲಿಹೈಕಮಾಂಡ್ ಒಪ್ಪಿಗೆ ಅನಿವಾರ್ಯ. ತಂದೆಯವರು ಹೇಳಿದ್ದು ಇದೇ ಸತ್ಯ ಎಂದು ಸ್ಪಷ್ಟಪಡಿಸಿದರು ಮುನಿಯಪ್ಪ ಸಿಎಂ ಆಗುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ನಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಪ್ರತಿಯೊಬ್ಬರಿಗೂ ಸಿಎಂ ಆಗಬೇಕೆಂಬ ಆಸೆ ಇರುವುದು ಸಹಜ. ಅದನ್ನ ತಪ್ಪು ಎನ್ನಲು ಸಾಧ್ಯವಿಲ್ಲ ಎಂದು ತಿಳಿಸಿದರು.SGF11 Women's Kanjivaram Pure Soft Silk Saree For Women Pure Golden Zari With Blouse Piece