ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಇತರೆ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಇದು ಹಿನ್ನಡೆಯಾಗಿದೆ.ರಾಜ್ಯದಲ್ಲಿ ಆರ್ಎಸ್ಎಸ್ ಮತ್ತು ಸರ್ಕಾರದ ನಡುವೆ ಕಳೆದ ಕೆಲವು ದಿನಗಳಿಂದ ಸಂಘರ್ಷ ಹೆಚ್ಚಾಗಿತ್ತು. ಕೆಲವು ಕಡೆ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಸಚಿವ ಪ್ರಿಯಾಂಕ ಖರ್ಗೆ ಅವರು ಬರೆದ ಪತ್ರದ ಆಧಾರದ ಮೇಲೆ ರ