ಬೆಂಗಳೂರು: ಬೆಂಗಳೂರು ನಗರದ ಹೆಬ್ಬಾಳದಿಂದ ಸಿಲ್ಕ್ಬೋರ್ಡ್ವರೆಗಿನ ಜೋಡಿ ಸುರಂಗ ಮಾರ್ಗದ ಯೋಜನೆಗಾಗಿ ಲಾಲ್ಬಾಗ್ ಸಸ್ಯ ತೋಟದೊಳಗಿನ ಮರಗಳನ್ನು ಕಡಿಯುವುದಿಲ್ಲ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್ಗೆ ತಿಳಿಸಿತು.ಇದನ್ನು ಓದಿ; ಭಾರತದಿಂದ UK ಗೆ GI ಟ್ಯಾಗ್ ಪಡೆದ ನಿಂಬೆ ಹಣ್ಣುಗಳ ಸಾಗಣೆ; ಇಂಡಿ ನಿಂಬೆ, - ಪುಳಿಯನ್‌ಕುಡಿ ನಿಂಬೆಯ ಮಾಹಿತಿ ಇಲ್ಲಿದೆ
ಸುರಂಗ ಮಾರ್ಗದ ಟೆಂಡರ್ ರದ್ದು ಕೋರಿ ಕಲಾವಿದ ಪ್ರಕಾಶ್ ಬೆಳವಾಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗಿಯ ಪೀಠ ವಿಚಾರಣೆ ನಡೆಸಿತು. ವಿಚಾರಣೆಯಲ್ಲಿ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರನ್ನು ಕುರಿತು “ಲಾಲ್ಬಾಗ್ನಲ್ಲಿ ಮರಗಳನ್ನು ಕತ್ತರಿಸಲಾಗುತ್ತಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಎಜಿ ಅವರು “ಇಲ್ಲ” ಎಂದು ಉತ್ತರಿಸಿದರು.Vogaan Men's T-Shirt and Shorts Set | Top & Shorts Night Suits Set | Night Wear for Men
ಈ ಹಿನ್ನೆಲೆಯಲ್ಲಿ ಪೀಠವು “ಮುಂದಿನ ವಿಚಾರಣೆಯವರೆಗೆ ಲಾಲ್ಬಾಗ್ನಲ್ಲಿ ಯಾವುದೇ ಮರಗಳನ್ನು ಕತ್ತರಿಸುವುದಿಲ್ಲ ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ. ಹೀಗಾಗಿ, ಯಾವುದೇ ಆದೇಶ ಅಥವಾ ಮಧ್ಯಂತರ ಆದೇಶ ಅಗತ್ಯವಿಲ್ಲ” ಎಂದು ಪೀಠವು ದಾಖಲಿಸಿತು.