ಮಂಡ್ಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿವೆ. ಜೆಡಿಎಸ್ ಭದ್ರಕೋಟೆ ಎಂದೇ ಕರೆಸಿಕೊಂಡಿದ್ದ ಮಂಡ್ಯದಲ್ಲಿ ಇದೀಗ ಕಾಂಗ್ರೆಸ್ ತನ್ನ ಪಾರುಪತ್ಯ ಮೆರೆದಿದೆ. ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಣಾಯಕ ಗೆಲುವು ಸಾಧಿಸುವ ಮೂಲಕ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ದೊಡ್ಡ ಆಘಾತ ನೀಡಿದೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 12 ನಿರ್ದೇಶಕ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ದಳಪತಿಗಳಿಗೆ ಮಂಡ್ಯದಲ್ಲೇ ಹಿನ್ನಡೆಯಾಗಿದ್ದು, ಜೆಡಿಎಸ್‌ಗೆ ತಮ್ಮ ಭದ್ರಕೋಟೆಯಲ್ಲೇ ಹಿಡಿತ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದ ಕಾರಣ, ಈ ಅವಿರೋಧ ಆಯ್ಕೆ ಸಾಧ್ಯವಾಯಿತು. ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಸಚಿನ್, ಪಿ. ಸಂದರ್ಶ, ಬಿ. ಗಿರೀಶ, ಕೆ.ವಿ. ದಿನೇಶ್, ಹೆಚ್. ಅಶೋಕ, ಎ. ವಿಜೇಂದ್ರಮೂರ್ತಿ ಮತ್ತು ಕೆ.ಸಿ. ಜೋಗಿಗೌಡ ಅವಿರೋಧವಾಗಿ ಆಯ್ಕೆಯಾದ ಪ್ರಮುಖರು.
ಉಳಿದ ಮೂರು ಸ್ಥಾನಗಳಿಗೆ ನವೆಂಬರ್ 2 ರಂದು ಚುನಾವಣೆ ನಡೆಯಲಿದೆ. ಆದರೆ, ಈ ಫಲಿತಾಂಶದ ಮೂಲಕ ಬ್ಯಾಂಕಿನ ಆಡಳಿತ ಚುಕ್ಕಾಣಿ ಈಗಾಗಲೇ ಕಾಂಗ್ರೆಸ್ ಪಾಲಾಗಿದೆ. ಇದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿನಿಧಿಸುವ ಸಂಸದೀಯ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿದೆ.
ಮಂಡ್ಯ ಡಿಸಿಸಿ ಬ್ಯಾಂಕ್ ಜಿಲ್ಲೆಯ ರೈತರಿಗೆ ಆರ್ಥಿಕ ನೆರವು ನೀಡುವ ಪ್ರಮುಖ ಸಂಸ್ಥೆಯಾಗಿದೆ. ಚುನಾವಣೆಗೆ ಮೊದಲೇ ಈ ಬ್ಯಾಂಕ್ ಅನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದು ರಾಜಕೀಯವಾಗಿ ದೊಡ್ಡ ಸಾಧನೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಇದು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿಗರಿಗೆ ಅಚ್ಚರಿ ಮೂಡಿಸಿದೆ. Alvami Women's Anarkali Kurta and Pant Set with Dupatta
ಸಚಿವ ಎನ್. ಚಲುವರಾಯಸ್ವಾಮಿ ಈ ಗೆಲುವಿನ ಕುರಿತು ಮಾತನಾಡಿ, ಸಹಕಾರ ಕ್ಷೇತ್ರದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳು. ಮಂಡ್ಯ ಡಿಸಿಸಿ ಬ್ಯಾಂಕ್ ಇತಿಹಾಸದಲ್ಲೇ ಮೊದಲ ಬಾರಿಗೆ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕರು ಮತ್ತು ಪಕ್ಷದ ಮುಖಂಡರ ಜವಾಬ್ದಾರಿಯುತ ಪ್ರಯತ್ನದಿಂದ ಇದು ಸಾಧ್ಯವಾಯಿತು ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದ ಕೆಎಸ್‌ಟಿಡಿಸಿ ವಯನಾಡು ಪೋಸ್ಟ್: ಕೇರಳದ ಪ್ರವಾಸೋದ್ಯಮಕ್ಕೆ ಉತ್ತೇಜನವೇ? - ಬಿಜೆಪಿಯಿಂದ ಆಕ್ರೋಶ!