Skip to main content
ವಿಡಿಯೋ
1/3
general

ಪ್ರಧಾನಿ ಮೋದಿ ಮೊದಲ ಬಾರಿಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮನ - ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿ

By Shravanthi R
ಪ್ರಧಾನಿ ಮೋದಿ ಮೊದಲ ಬಾರಿಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮನ - ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ನವೆಂಬರ್ 28 ರಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆಂದು ಉಡುಪಿಯ ಕೃಷ್ಣಮಠದ ಮೂಲಗಳು ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ನವೆಂಬರ್ 28 ರಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸಲಿರುವ ಅವರು ದೇವರ ಸನ್ನಿಧಿಯಲ್ಲಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಿದ್ದಾರೆ. 

ಆ ಬಳಿಕ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ. ಗೀತಾ ಜಯಂತಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಕಾರ್ಯಕ್ರಮ ನಡೆಯಲಿದೆ.  SASSAFRAS Women Blast Denim Front Button Mini Dress

ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಅವರು ಆಗಮಿಸುವ ಬಗ್ಗೆ ಕಚೇರಿಯು ದೃಢಪಡಿಸಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ. ಅವರು ಮೊದಲ ಬಾರಿಗೆ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅದ್ದೂರಿಯಿಂದ ಸ್ವಾಗತ ಹಾಗೂ ಭದ್ರತಾ ವ್ಯವಸ್ಥೆಗೆ ಸಜ್ಜಾಗಿಸಲಾಗಿದೆ. ಇದನ್ನೂ ಓದಿ: ಭದ್ರಕೋಟೆಯಲ್ಲಿ ಹಾರಿದ JDS ಹಕ್ಕಿ: ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್ ಜಯ, ಜೆಡಿಎಸ್‌ ಸೋಲಿನಿಂದ ಮೈತ್ರಿಕೂಟಕ್ಕೆ ಆಘಾತ!