ಬೆಂಗಳೂರು: ರಾಜಧಾನಿಯಲ್ಲಿ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು. ಇದರಲ್ಲಿ ಕಸ ವಿಲೇವಾರಿ ಹಾಗೂ ತ್ಯಾಜ್ಯ ನಿರ್ವಹಣೆಯು ತಲೆನೋವಿನ ಸಮಸ್ಯೆಯೆನಿಸಿದೆ. ಎಲ್ಲೆಂದರಲ್ಲಿ ಕಸವನ್ನು ಬೇರ್ಪಡಿಸದೇ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಲ್ಲಿ ಜಿಬಿಎ ಮುಂದಾಗಿದೆ. ಇದರಡಿಯ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ನಗರದ ಐದು ಮಹಾನಗರ ಪಾಲಿಕೆಗಳ 190 ವಾರ್ಡ್‌ಗಳಲ್ಲಿ ಕಸ ಸುರಿಯುವ ಹಬ್ಬವನ್ನು ಪ್ರಾರಂಭಿಸಿದೆ. ಈ ಮೂಲಕ ಯಾರು ಕಸವನ್ನು ಎಲ್ಲೆಂದರಲ್ಲಿ ಎಸೆಯುವರೋ ಅವರ ವಿರುದ್ದ ಅಭಿಯಾನವನ್ನು ಕೈಗೊಂಡಿದೆ ಎನ್ನಲಾಗಿದೆ.
ಈ ಮೂಲಕ ನಗರದಲ್ಲಿ ಶಿಸ್ತಿನಿಂದ ಕಸ ಸಂಗ್ರಹಣೆ ಹಾಗೂ ನಿರ್ವಹಣೆಗೆ ಎಲ್ಲರ ಜವಾಬ್ದಾರಿಯನ್ನು ತಿಳಿಸಲಾಗಿದೆ. ಹಲವಾರು ಜಾಗೃತಿ ಅಭಿಯಾನಗಳನ್ನು ನಡೆಸುತ್ತಿದ್ದರೂ ಸಹ, ಸಾರ್ವಜನಿಕರು ಪ್ಲಾಸ್ಟಿಕ್, ಪಾಲಿಥಿನ್ ಚೀಲಗಳಲ್ಲಿ ಕಟ್ಟಿ ಕಸವನ್ನು ಬೀದಿ ಮೂಲೆಗಳಲ್ಲಿ ಎಸೆಯುತ್ತಾರೆ, ಹೀಗೆ ಮಾಡದಂತೆ ನಾವು ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು. ಈ ಬಗ್ಗೆ ಡಿಸಿಎಂ ಡಿಕೆಶಿಯವರು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರಿಗೆ ಸ್ಥಾಯಿ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. Nermosa Women Printed Anarkali Kurta and Pant Set with Dupatta
ಈ ಬಗ್ಗೆ ವ್ಯವಸ್ಥಾಪಕ ನಿರ್ದೇಶಕ ಕರೀಗೌಡ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ. ಉಪಮುಖ್ಯಮಂತ್ರಿಗಳು, ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ಕಟ್ಟುನಿಟ್ಟಿನ ಸೂಚನೆಗಳಂತೆ, ಈ ಅಭಿಯಾನವನ್ನು ಜಾರಿಗೆ ತರಲಾಗಿದೆ. ಕಸದ ತಿಕ್ಕಾಟವನ್ನು ನಿಯಂತ್ರಿಸುವ ಸಲುವಾಗಿ ಹೀಗೆ ಮಾಡಲಾಗಿದೆ. ಮಾಹಿತಿ ಒದಗಿಸಿದ ಅವರು, ತಮ್ಮ ಮಾರ್ಷಲ್‌ಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡ ಆಧಾರವಾಗಿ, ಅವರ ಮನೆ ಹಾಗೂ ಫೋನ್ ಸಂಖ್ಯೆಗಳನ್ನು ಟ್ರ್ಯಾಕ್ ಮಾಡಿದ್ದಾರೆ. ಅವರ ಕೊಳಕು ಕೃತ್ಯಕ್ಕೆ ಪುರಾವೆ ಒದಗಿಸಿದ್ದೇವೆ ಎಂದರು. ಇದನ್ನೂ ಓದಿ: ಪ್ರಧಾನಿ ಮೋದಿ ಮೊದಲ ಬಾರಿಗೆ ಉಡುಪಿ ಕೃಷ್ಣಮಠಕ್ಕೆ ಆಗಮನ - ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿ