Skip to main content
ವಿಡಿಯೋ
1/3
politics

ಧರ್ಮಸ್ಥಳ ಪ್ರಕರಣ ಸಾಮೂಹಿಕ ಶವಸಂಸ್ಕಾರ ಪ್ರಕರಣ: ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ!

By Vinutha U
 ಧರ್ಮಸ್ಥಳ ಪ್ರಕರಣ ಸಾಮೂಹಿಕ ಶವಸಂಸ್ಕಾರ ಪ್ರಕರಣ: ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ!

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ರಮ ಶವಸಮಾಧಿ ಆರೋಪದ ಪ್ರಕರಣದಲ್ಲಿ, ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ದೂರುದಾರರಾದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಟಿ ಜಯಂತ್ ಅವರನ್ನು ಪೊಲೀಸರ ಕಿರುಕುಳದಿಂದ ರಕ್ಷಿಸಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಸಮಾಧಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ, ಆರೋಪ ಮಾಡಿದವರೇ ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ತನಿಖೆಗೆ ಮಧ್ಯಂತರ ತಡೆ ನೀಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲ್‌ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. Shining Diva Fashion Crystal Tiara and Crown for Women Stylish Headband Crowns with Comb Tiaras for Girls Kids Queen Princess Wedding Bridal Birthday Gift Hair Accessories

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್ ಬಾಲಕೃಷ್ಣನ್‌, ಅರ್ಜಿದಾರರಿಗೆ ಇದುವರೆಗೂ 9 ಬಾರಿ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಲಾಗಿದೆ. ಆದರೂ, ಎಫ್‌ಐಆರ್‌ನಲ್ಲಿ ಅವರನ್ನು ಆರೋಪಿಗಳೆಂದು ಹೆಸರಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ವೈಯಕ್ತಿಕವಾಗಿ ನೋಟಿಸ್ ನೀಡದೆ, ವಾಟ್ಸಪ್ ಮತ್ತು ಇಮೇಲ್ ಮೂಲಕ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.

ಬಿಎನ್‌ಎಸ್‌ಎಸ್ ಸೆಕ್ಷನ್ 35(3) ಅಡಿಯಲ್ಲಿ ನೀಡಿರುವ ಸಮನ್ಸ್ ಕಾನೂನುಬಾಹಿರವಾಗಿದೆ. ಏಕೆಂದರೆ ಅರ್ಜಿದಾರರು ಆರೋಪಿಗಳೂ ಅಲ್ಲ, ಸಾಕ್ಷಿಗಳೂ ಅಲ್ಲ. ರಾಜಕೀಯ, ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರಸ್ತುತ, 10ನೇ ನೋಟಿಸ್ ನೀಡುವ ಮೂಲಕ ಅವರನ್ನು ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಲಾಗುತ್ತದೆ. ಈಗಾಗಲೇ 150 ಗಂಟೆಗಳಿಗೂ ಹೆಚ್ಚು ಕಾಲ ದೂರುದಾರರನ್ನು ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ ಬಿಎನ್‌ಎಸ್‌ ಸೆಕ್ಷನ್‌ 211(ಎ) ಅಡಿ ಎಫ್‌ಐಆರ್‌ ದಾಖಲಿಸಿ, ಎರಡೂವರೆ ತಿಂಗಳ ನಂತರ ಹೊಸ ಸೆಕ್ಷನ್‌ಗಳನ್ನು ಸೇರಿಸಲಾಗಿದೆ ಎಂದು ಅವರು ವಿವರಿಸಿದರು.

ಈ ನೋಟಿಸ್‌ಗಳನ್ನು ರದ್ದುಗೊಳಿಸಬೇಕು ಮತ್ತು ಅರ್ಜಿದಾರರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ಬಾಲಕೃಷ್ಣನ್‌ ನ್ಯಾಯಾಲಯಕ್ಕೆ ಮನವಿ ಮಾಡಿದರು. KIADB: 13.19 ಕೋಟಿ ಅಕ್ರಮ ಪರಿಹಾರ ವಿತರಣೆ – ಜಿಪಿಎ ಹೋಲ್ಡರ್ ಗಳಿಂದ ಗಂಭೀರ ದೂರು

ಎಸ್‌ಐಟಿ ಪರ ವಾದ ಮಂಡಿಸಿದ ಹೆಚ್ಚುವರಿ ರಾಜ್ಯ ಸಾರ್ವಜನಿಕ ಅಭಿಯೋಜಕ ಬಿ ಎನ್ ಜಗದೀಶ, ಪೊಲೀಸರು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಂಡಿದ್ದಾರೆ ಮತ್ತು ಬಿಎನ್‌ಎಸ್‌ಎಸ್‌ನ 35(3) ಅಡಿಯಲ್ಲಿಯೇ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ಅರ್ಜಿದಾರರು ನ್ಯಾಯಾಲಯ ಮತ್ತು ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ವಾದಿಸಿದರು.