ಬೆಳಗಾವಿ: ಕಬ್ಬು ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರಾಜ್ಯದ ಹಲವೆಡೆ ಕಬ್ಬು ಬೆಳೆಗಾರರು ಬೃಹತ್ ಹೋರಾಟಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.ಇದನ್ನೂ ಓದಿ: ಖಲಿಸ್ತಾನಿ ಸಂಘಟನೆಯಿಂದ ಬಿಗ್ ಬಿ ಅಮಿತಾಬ್ ಬಚ್ಚನ್‌ಗೆ ಬೆದರಿಕೆ? ಕಾರಣ ಏನು?
ಪ್ರತಿ ಟನ್ ಕಬ್ಬಿಗೆ ₹3,363 ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಬೀದಿಗಿಳಿದು ಆಗ್ರಹಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಪ್ರತಿಭಟನೆ ಕಾವೇರಿದ್ದು, ರೈತರು ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೀತು ಹೃದಯವಿದ್ರಾವಕ ಘಟನೆ: ಕೆರೆ ನೀರಿನಲ್ಲಿ ಮುಳುಗಿ ಅಣ್ಣ-ತಮ್ಮ ದುರ್ಮರಣ!
ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಖಾನೆ ಮಾಲೀಕರು ರೈತರ ಬೇಡಿಕೆಗೆ ಒಪ್ಪದ ಹಿನ್ನೆಲೆಯಲ್ಲಿ, ರೈತರು ರಸ್ತೆ ತಡೆದು ಪ್ರತಿಭಟನೆಗೆ ಇಳಿದಿದ್ದಾರೆ.ಇದನ್ನೂ ಓದಿ: ಬಿಹಾರ - ಚುನಾವಣೆ ಸಮೀಪಿಸಿತ್ತಿರುವ ನಡುವೆ ರಕ್ತಪಾತ - ಜನ ಸುರಾಜ್ ಪಕ್ಷದ ವ್ಯಕ್ತಿ ಹ**ತ್ಯೆ!
ಬೆಂಬಲ ಬೆಲೆಯನ್ನು ನಿಗದಿ ಮಾಡದ ಹೊರತು ಯಾವುದೇ ಕಾರಣಕ್ಕೂ ಕಾರ್ಖಾನೆ ಆರಂಭಿಸಲು ಬಿಡುವುದಿಲ್ಲ, ಎಂದು ರೈತರು ಪಟ್ಟು ಹಿಡಿದಿದ್ದಾರೆ. ಸೂಕ್ತ ಬೆಲೆ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತ ಮುಖಂಡರು ಘೋಷಿಸಿದ್ದಾರೆ.SGF11 Women's Kanjivaram Pure Soft Silk Saree With Unstitched Blouse Piece