Skip to main content
ವಿಡಿಯೋ
1/2
entertainment

ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳು ನಿಷೇಧ: ನಂದಿನಿ ತಿನಿಸುಗಳು ಕಡ್ಡಾಯ!

By Vinutha U
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳು ನಿಷೇಧ: ನಂದಿನಿ ತಿನಿಸುಗಳು ಕಡ್ಡಾಯ!

ಇಲಾಖಾ ಸಚಿವರ ಕಚೇರಿಗಳು, ಸಚಿವಾಲಯಗಳು ಸೇರಿದಂತೆ ರಾಜ್ಯದೆಲ್ಲ ಸರ್ಕಾರಿ ಸಂಸ್ಥೆಗಳ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಒದಗಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಈ ಸೂಚನೆಯನ್ನು ಎಲ್ಲ ಇಲಾಖಾ ಮುಖ್ಯಸ್ಥರಿಗೆ ತಿಳಿಸಿ, ಜಾರಿಗೊಳಿಸಲು ಸೂಕ್ತ ಆದೇಶಗಳನ್ನು ಹೊರಡಿಸುವಂತೆಯೂ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯಾದ್ಯಂತ ನಡೆಯುವ ಎಲ್ಲ ಸರ್ಕಾರಿ ಸಭೆಗಳು, ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿಗೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿ, ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜತೆಗೆ, ಈ ಸಭೆಗಳಲ್ಲಿ ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಂಎಫ್) ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ, ರಾಜ್ಯದೆಲ್ಲ ಸರ್ಕಾರಿ ಕಚೇರಿಗಳು, ಸಭೆಗಳು ಮತ್ತು ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬದಲಿಗೆ ಎಲೆ, ಕಾಗದ ಅಥವಾ ಇತರ ಪರಿಸರ ಸ್ನೇಹಿ ವಸ್ತುಗಳಿಂದ ಮಾಡಿದ ಪಾತ್ರೆಗಳನ್ನು ಬಳಸುವಂತೆ ಸೂಚಿಸಿದ್ದಾರೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ ಸಹಾಯವಾಗುವ ಉದ್ದೇಶವಿದೆ.

ಇದೇ ರೀತಿ, ಇಲಾಖಾ ಸಚಿವರ ಕಚೇರಿಗಳು, ಸಚಿವಾಲಯಗಳು ಸೇರಿದಂತೆ ರಾಜ್ಯದೆಲ್ಲ ಸರ್ಕಾರಿ ಸಂಸ್ಥೆಗಳ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಒದಗಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಈ ಸೂಚನೆಯನ್ನು ಎಲ್ಲ ಇಲಾಖಾ ಮುಖ್ಯಸ್ಥರಿಗೆ ತಿಳಿಸಿ, ಜಾರಿಗೊಳಿಸಲು ಸೂಕ್ತ ಆದೇಶಗಳನ್ನು ಹೊರಡಿಸುವಂತೆಯೂ ಸೂಚಿಸಲಾಗಿದೆ. ಇದರಿಂದ ಸ್ಥಳೀಯ ಉತ್ಪನ್ನಗಳ ಪ್ರೋತ್ಸಾಹ ಮತ್ತು ರೈತರ ಆದಾಯ ಹೆಚ್ಚಿಸುವ ಗುರಿ ಈಡೇರಲಿದೆ. ಈ ನಿರ್ಧಾರಗಳು ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಉದ್ಯಮಗಳ ಬೆಂಬಲಕ್ಕೆ ಮುಖ್ಯ ಹೆಜ್ಜೆಯಾಗುವ ಎಂದು ಸರ್ಕಾರಿ ವರ್ಗಗಳು ತಿಳಿಸಿವೆ.