ನವದೆಹಲಿ: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವದ (Karnataka Rajyotsava) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ. ಅವರು ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿನಂದನೆಯನ್ನು ತಿಳಿಸಿದ್ದಾರೆ.ಇದನ್ನೂ ಓದಿ: ರಾಜ್ಯೋತ್ಸವದ ದಿನವೇ ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯಕ ರಾಜ್ಯ ಬೇಕೆಂದು ಆಗ್ರಹ..!
ಟ್ವೀಟ್ನಲ್ಲಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: 69ನೇ ರಾಜ್ಯೋತ್ಸವದ ಸಂಭ್ರಮದಲ್ಲಿ ಕರ್ನಾಟಕ; ಸಂಸ್ಕೃತಿ ಮತ್ತು ಆವಿಷ್ಕಾರದ ತವರೂರು
ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಹಾರೈಸಿದ್ದಾರೆ. ಪ್ರಧಾನಿಯವರ ಈ ವಿಶೇಷ ಶುಭಾಶಯವು ನಾಡಿನಾದ್ಯಂತ ಅಭಿಮಾನವನ್ನು ಮೂಡಿಸಿದೆ.SWORNOF Women's Kanjivaram Soft Silk Banarasi Sarees With Unstiched Blouse Piece