ರಾಮನಗರ, ನವೆಂಬರ್ 1: ದೇವಿಗೆರೆ ಕ್ರಾಸ್ ಬಳಿಯ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 35 ಯುವತಿಯರು ಸೇರಿ ಒಟ್ಟು 115 ಜನರನ್ನು ವಶಕ್ಕೆ ಪಡೆಯಲಾಗಿದೆ.
ಗೌಪ್ಯ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ತಂಡವು ಎಲ್ಲರನ್ನೂ ಬಂಧಿಸಿ ರಾಮನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ. ದಾಳಿ ಸಮಯದಲ್ಲಿ ಮಾಧ್ಯಮಗಳು ಮತ್ತು ಇತರರು ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದಾಗ ಪೊಲೀಸರು ಅದನ್ನು ತಡೆದಿದ್ದಾರೆ. ಈ ಘಟನೆ ಪ್ರದೇಶದಲ್ಲಿ ಬಲು ಸಂಚಲನ ಮೂಡಿಸಿದ್ದು, ಹೆಚ್ಚಿನ ವಿವರಗಳು ತಿಳಿಯಬೇಕಿದೆ.