Skip to main content
ವಿಡಿಯೋ
1/3
general

ಭೀಕರ ರಸ್ತೆ ಅಪಘಾತ: ಮದುವೆ ಮುಗಿಸಿ ಬಂದವರು ಸೇರಿದ್ದು ಮಸಣಕ್ಕೆ

By Bhavana Gowda
ಭೀಕರ ರಸ್ತೆ ಅಪಘಾತ: ಮದುವೆ ಮುಗಿಸಿ ಬಂದವರು ಸೇರಿದ್ದು ಮಸಣಕ್ಕೆ

ರಾಜಸ್ಥಾನದ ಅಲ್ವಾರ್‌ನಲ್ಲಿರುವ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛಾಥಿ ಮೈಲ್ ಬಳಿ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಲ್ವಾರ್ (ರಾಜಸ್ಥಾನ): ರಾಜಸ್ಥಾನದ ಅಲ್ವಾರ್‌ನಲ್ಲಿರುವ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛಾಥಿ ಮೈಲ್ ಬಳಿ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ನಂಗಲ್ ಖೇಡಾ ಗ್ರಾಮದ ಒಂದೇ ಕುಟುಂಬದ ಐವರು ಮಂದಿ ಮದುವೆ ಸಮಾರಂಭ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಥಾರ್ ವಾಹನವು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರನ್ನು ಅಲ್ವಾರ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿತ್ತು. ಆದರೆ, ಆ ಇಬ್ಬರಲ್ಲಿ ಒಬ್ಬ ಮಹಿಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಮಹೇಂದ್ರ (35), ಅವರ ಪತ್ನಿ ಗುಡ್ಡಿ(33),ಸೊಸೆ ಪಾಯಲ್ (8), ಮಗ ಪೂರ್ವಾಂಶ (3) ಮಹೇಂದ್ರ ಅವರ ಮಗಳು ಖುಷ್ಬೂ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ.

ಸದರ್ ಪೊಲೀಸ್ ಠಾಣೆಯ ಎಎಸ್ಐ ಬನ್ಸಿಲಾಲ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸರು ಥಾರ್ ವಾಹನ ಮತ್ತು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. ವಾಹನದ ಚಾಲಕ ಘಟನೆಯ ನಂತರ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.