ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಪವಿತ್ರಾ ಗೌಡ ಎರಡನೇ ಬಾರಿಗೆ ಬಂಧನಕ್ಕೊಳಗಾದ ನಂತರ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ. ಇಂದು ನಗರದ ಸೆಷನ್ಸ್ ನ್ಯಾಯಾಲಯಕ್ಕೆ ಪ್ರಕರಣದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ನ್ಯಾಯಾಲಯದಲ್ಲಿ ಆರೋಪ ನಿಗದಿಪಡಿಸುವ ಪ್ರಕ್ರಿಯೆ ನಡೆಯಿತು.JOHN PRIDE Plus Size Men's Stretchable Mid-Rise Comfort Fit Clean Look Blue Cotton Jeans for Men
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ನ್ಯಾಯಾಧೀಶರ ಮುಂದೆ ಸಾಲಾಗಿ ನಿಂತಿದ್ದಾಗ ದರ್ಶನ್ ಅವರು ಪವಿತ್ರಾ ಗೌಡ ಅವರ ಹಿಂದೆ ನಿಂತಿದ್ದರು. ಈ ವೇಳೆ ಪವಿತ್ರಾ ಗೌಡ ದರ್ಶನ್ ಅವರನ್ನು 'ಮುಂದೆ ಬಾ' ಎಂದು ಕರೆದಿದ್ದಾರೆ.ಇದನ್ನು ಓದಿ:ಶಾರುಖ್ ಅಭಿಮಾನಿಗಳಿಗೆ ಸಿಹಿಸುದ್ದಿ...ಬರಲಿದೆ 'ರಾ.ಒನ್ 2'! ಇಲ್ಲಿದೆ ಮಾಹಿತಿ
ಪವಿತ್ರಾ ಅವರ ಕರೆಯ ನಂತರ ದರ್ಶನ್ ಮುಂದೆ ಬಂದು ಪರಸ್ಪರ ಮಾತನಾಡಿದ್ದಾರೆ. ಪರಪ್ಪನ ಅಗ್ರಹಾರದಿಂದ ನ್ಯಾಯಾಲಯಕ್ಕೆ ಕರೆತರುವಾಗ, ದರ್ಶನ್ ಮತ್ತು ಪವಿತ್ರಾ ಗೌಡ ಅವರನ್ನು ಪೊಲೀಸರು ಪ್ರತ್ಯೇಕ ವಾಹನಗಳಲ್ಲಿ ಕರೆತಂದಿದ್ದರು.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳನ್ನು ಆಗಸ್ಟ್ 14 ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು.