Skip to main content
ವಿಡಿಯೋ
1/3
politics

ಕಲ್ಯಾಣ ಕರ್ನಾಟಕದಲ್ಲಿ ಶಕ್ತಿ ಯೋಜನೆ ಪ್ರಯೋಜನ ಶೂನ್ಯ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್. ಅಶೋಕ್ ವಾಗ್ದಾಳಿ!

By Pavitra Ganapathi Baradavalli
ಕಲ್ಯಾಣ ಕರ್ನಾಟಕದಲ್ಲಿ ಶಕ್ತಿ ಯೋಜನೆ ಪ್ರಯೋಜನ ಶೂನ್ಯ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್. ಅಶೋಕ್ ವಾಗ್ದಾಳಿ!

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟ್ವಿಟರ್‌ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟ್ವಿಟರ್ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಕ್ತಿ ಯೋಜನೆಯ ವೈಫಲ್ಯವನ್ನು ಪ್ರಶ್ನಿಸಿರುವ ಅಶೋಕ್, ಕಲ್ಯಾಣ ಕರ್ನಾಟಕದ 38 ಹಳ್ಳಿಗಳಿಗೆ ಬಸ್ ಸೌಲಭ್ಯವೇ ಇಲ್ಲ, ಕಾರಣ ಯೋಗ್ಯ ರಸ್ತೆಗಳೇ ಇಲ್ಲ.ಇದನ್ನೂ ಓದಿ: ಆಗಸ್ಟ್‌ನಲ್ಲಿ ಭಾರತೀಯ ವಿದ್ಯಾರ್ಥಿ ವೀಸಾ ಅರ್ಜಿಗಳಲ್ಲಿ ಶೇ. 75 ರಷ್ಟು ತಿರಸ್ಕರಿಸಿದ ಕೆನಡಾ ಸರ್ಕಾರ.!


ಬಸ್ಸಿಲ್ಲದ ಕಾರಣ ಜನ ದುಪ್ಪಟ್ಟು ಹಣ ತೆತ್ತು ಟಂಟಂ, ಜೀಪ್ಗಳಲ್ಲಿ ಪ್ರಯಾಣಿಸುವ ದೃಶ್ಯ ತಮಗೆ ಕಾಣುತ್ತಿಲ್ಲವೇ ಎಂದು ಖರ್ಗೆಯವರಿಗೆ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ. ಖರ್ಗೆ ಕುಟುಂಬ ಕಲ್ಯಾಣ ಕರ್ನಾಟಕದ ಜನರ ಮತ ಪಡೆದು ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿದೆ ಎಂದು ಅಶೋಕ್ ಟೀಕಿಸಿದ್ದಾರೆ.ಇದನ್ನೂ ಓದಿ: ಚೀನಾ-ರಷ್ಯಾ ಭಯಕ್ಕೆ ಟ್ರಂಪ್‌ನಿಂದ Nulcear ಆಟ ಶುರು..! ಮತ್ತೆ ಶುರು ಆಗುತ್ತಾ Cold War?


ಆರ್.ಎಸ್.ಎಸ್. ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ವೈಫಲ್ಯವನ್ನು ಮರೆಮಾಚಲು ಪ್ರಯತ್ನಿಸಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷವನ್ನು ನಿಷೇಧಿಸುವ ದಿನ ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮತ್ತು ಸಾರಿಗೆ ಸಮಸ್ಯೆಗಳು ರಾಜಕೀಯ ಜಟಾಪಟಿಗೆ ಕಾರಣವಾಗಿವೆ.SGF11 Women's Kanjivaram Pure Soft Silk Saree With Unstitched Blouse Piece