Skip to main content
ವಿಡಿಯೋ
1/3
cinema

ಪವಿತ್ರಾ ಗೌಡ ಮತ್ತೆ ಸುಪ್ರೀಂ ಕೋರ್ಟ್ ಬಾಗಿಲಿಗೆ..ಜಾಮೀನು ತೀರ್ಪಿನ ಮರುಪರಿಶೀಲನೆ ಅರ್ಜಿ..!

By Ram Chethan
ಪವಿತ್ರಾ ಗೌಡ ಮತ್ತೆ ಸುಪ್ರೀಂ ಕೋರ್ಟ್ ಬಾಗಿಲಿಗೆ..ಜಾಮೀನು ತೀರ್ಪಿನ ಮರುಪರಿಶೀಲನೆ ಅರ್ಜಿ..!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ನೀಡಿದ್ದ ಜಾಮೀನು ರದ್ದು ತೀರ್ಪಿನ ವಿರುದ್ಧ ಮರುಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 6ರಂದು ವಿಚಾರಣೆ ನಡೆಯಲಿದ್ದು, ಈ ಬೆಳವಣಿಗೆ ಪ್ರಕರಣವನ್ನು ಮತ್ತೊಮ್ಮೆ ರಾಜ್ಯ ರಾಜಕೀಯ ಮತ್ತು ಸಿನಿರಂಗದಲ್ಲಿ ಚರ್ಚೆಯ ಕೇಂದ್ರಬಿಂದುಗಾಗಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಅವರು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದಾರೆ. ಜಾಮೀನು ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಅವರು ಪುನರ್‌ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ.Titan Quartz Analog With Date White Dial Gold Metal Strap Watch for Men - NT9264YM01

ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಿದ್ದರೂ, ಬಳಿಕ ಸುಪ್ರೀಂ ಕೋರ್ಟ್ ಆ ತೀರ್ಪನ್ನು ರದ್ದುಪಡಿಸಿತ್ತು. ಈಗ ಅದೇ ಆದೇಶದ ಮರುಪರಿಶೀಲನೆಗಾಗಿ ಅವರು ಕೋರ್ಟ್ ಮೊರೆ ಹೋಗಿದ್ದಾರೆ.ಇದನ್ನು ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: 2 ತಿಂಗಳ ಬಳಿಕ ದರ್ಶನ್‌-ಪವಿತ್ರಾ ಮಾತು...ಕೋರ್ಟ್‌ನಲ್ಲೇ ಪವಿತ್ರಾನ ಮುಂದೆ ಬಾ ಎಂದ ದಾಸ!

ಈ ಪ್ರಕರಣದ ವಿಚಾರಣೆ ನವೆಂಬರ್ 6ರಂದು ನಡೆಯಲಿದ್ದು, ಸುಪ್ರೀಂ ಕೋರ್ಟ್ ಪವಿತ್ರಾ ಗೌಡ ಅವರ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕಳೆದ ಹಲವು ತಿಂಗಳುಗಳಿಂದ ರಾಜ್ಯ ರಾಜಕೀಯ ಮತ್ತು ಚಿತ್ರರಂಗದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಪವಿತ್ರಾ ಗೌಡ ಅವರ ಈ ಹೆಜ್ಜೆಯಿಂದ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ.