ಛತ್ತೀಸ್‌ಗಢ: ಕೆಲವೇ ತಿಂಗಳ ಅಂತರದಲ್ಲಿ ಮತ್ತೆ ಭೀಕರ ರೈಲು ದುರಂತ ಸಂಭವಿಸಿದ್ದು, ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಪ್ಯಾಸೆಂಜರ್ ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ರೈಲಿನ ಚಾಲಕ ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರು ಇನ್ನೂ ಅವಶೇಷಗಳ ಅಡಿ ಸಿಲುಕಿದ್ದಾರೆ ಎನ್ನಲಾಗಿದೆ.
ಗೇವ್ರಾದಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಅಪರಾಹ್ನ 4 ಗಂಟೆ ಸುಮಾರಿಗೆ ಗತೌರಾ ಮತ್ತು ಬಿಲಾಸ್‌ಪುರ ನಿಲ್ದಾಣಗಳ ಮಧ್ಯೆ ಸಂಚರಿಸುತ್ತಿದ್ದಾಗ, ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗೂಡ್ಸ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಪ್ರಯಾಣಿಕ ರೈಲಿನ ಕೆಲವು ಬೋಗಿಗಳು ಒಂದರ ಮೇಲೊಂದು ಜಿಗಿದು ಬಿದ್ದಿದ್ದು, ಅಪಘಾತದ ತೀವ್ರತೆಗೆ ಅನೇಕರು ಬೋಗಿಗಳ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಒಂದೇ ಲೈನ್ ನಲ್ಲಿ ಮತ್ತು ಒಂದೇ ದಿಕ್ಕಿನಲ್ಲಿ ರೈಲುಗಳು ಡಿಕ್ಕಿ ಹೊಡೆದ ಘಟನೆಗೆ ಸಿಗ್ನಲಿಂಗ್ ವೈಫಲ್ಯ ಅಥವಾ ಮಾನವ ಲೋಪ ಕಾರಣವೇ ಎಂಬ ಬಗ್ಗೆ ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆಗೆ ಆದೇಶಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ; ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಬೆಂಗಳೂರು JDS ನಗರ ಅಧ್ಯಕ್ಷ H.M. ರಮೇಶ್ ಗೌಡ ನೇತೃತ್ವದಲ್ಲಿ ಸಭೆ
ರೈಲ್ವೆ ಅಧಿಕಾರಿಯೊಬ್ಬರ ಹೇಳಿಕೆಯ ಪ್ರಕಾರ, ಈ ದುರಂತಕ್ಕೆ ಚಾಲಕನ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ.
"ಪ್ಯಾಸೆಂಜರ್ ರೈಲು ಚಾಲಕನಿಗೆ ರೆಡ್ ಸಿಗ್ನಲ್ ಇದ್ದರೂ ಅದನ್ನು ಜಂಪ್ ಮಾಡಿದ್ದಾನೆ. ಗೂಡ್ಸ್ ರೈಲು ಸನಿಹದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದರೂ, ಆತ ಎಮರ್ಜೆನ್ಸಿ ಬ್ರೇಕ್ ಹಾಕಿಲ್ಲ. Shining Diva Fashion Crystal Tiara and Crown for Women Stylish Headband Crowns with Comb Tiaras for Girls Kids Queen Princess Wedding Bridal Birthday Gift Hair Accessories
ಸುಮಾರು 60-70 ಕಿ.ಮೀ. ವೇಗದಲ್ಲಿ ರೈಲು ಚಲಾಯಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆಸಿದ್ದಾನೆ."ರೈಲ್ವೆ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ, ಗಂಭೀರವಾಗಿ ಗಾಯಗೊಂಡವರಿಗೆ ₹5 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ₹1 ಲಕ್ಷ ಪರಿಹಾರಧನ ನೀಡುವುದಾಗಿ ಘೋಷಿಸಿದೆ.