ನವದೆಹಲಿ: ರಾಷ್ಟ್ರರಾಜಕಾರಣದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ಬಾರಿ ಸುದ್ದಿಯಲ್ಲಿದೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಮುನ್ಸೂಚನೆಯನ್ನು ನೀಡಿದ್ದಾರೆ.ಮುಂಬರುವ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೃಹತ್ ಬಹುಮತವನ್ನು ಪಡೆಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವು 160ಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿಯು) ಎರಡೂ ಅತ್ಯುತ್ತಮ ಸ್ಟ್ರೈಕ್ ರೇಟ್ (ಗೆಲುವಿನ ಪ್ರಮಾಣ) ಹೊಂದಲಿವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಅಮಿತ್ ಶಾ ಅವರ ಈ ವಿಶ್ವಾಸದ ಮಾತುಗಳು, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ಸೂಚಿಸುತ್ತವೆ.
ಬಿಹಾರ ವಿಧಾನಸಭಾ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಆಗಿರುವುದರಿಂದ ಗೆಲುವು ಸಾಧಿಸುವುದು ಅನಿವಾರ್ಯಾವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪ್ರಬಲ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.