ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಹಲವಾರು ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಸ್ಮಾರ್ಟ್ ಮೀಟರ್‌ಗೆ ಸಂಬಂಧಿಸಿದಂತೆ ಬಹುಕೋಟಿ ಹಗರಣ ನಡೆದಿದೆ ಎಂಬ ಗುಮಾನಿ ಎಲ್ಲಾ ಕಡೆಗಳಲ್ಲೂ ಹೆಚ್ಚಾಗಿದೆ. ಸಾವಿರಾರು ಕೋಟಿಯನ್ನು ಮನೆಗಳಿಗೆ ಹೊಸದಾಗಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ನುಂಗಿ ಹಾಕಿದ್ದಾರೆ ಎಂಬ ಅನುಮಾನ ಎಲ್ಲರಲ್ಲೂ ಹೆಚ್ಚಾಗಿತ್ತು.ಇದನ್ನೂ ಓದಿ: ₹100 ಕೋಟಿ ಭ್ರಷ್ಟಾಚಾರದ ಪ್ರಕರಣದಲ್ಲಿ ಉತ್ತರ ಪ್ರದೇಶದ ಟಾಪ್ ಪೊಲೀಸ್ ಅಧಿಕಾರಿ ಅಮಾನತು
ಈ ಆರೋಪದಲ್ಲಿ ಇಂಧನ ಸಚಿವರಾದ ಕೆ ಜೆ ಜಾರ್ಜ್ ಅವರನ್ನು ನೇರವಾಗಿ ಹೊಣೆ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಉಚ್ಛ ನ್ಯಾಯಾಲಯ ರಾಜ್ಯದ ಸ್ಮಾರ್ಟ್ ಮೀಟರ್ ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಸಲ್ಲಿಸಿರುವ ಖಾಸಗಿ ದೂರಿನ ಅನ್ವಯ ವಿಶೇಷ ನ್ಯಾಯಾಲಯ ಮಾಡಿರುವ ಆದೇಶವನ್ನು ಪ್ರಶ್ನಿಸಿ ಇಂಧನ ಸಚಿವರಾದ ಕೆ ಜೆ ಜಾರ್ಜ್ ಒಳಗೊಂಡು ಕೆಲವು ಅಧಿಕಾರಿಗಳನ್ನು ಕುರಿತು ವಿಚಾರಣೆಯನ್ನು ಇಂದು ನಡೆಸಲಿದೆ.ಇದನ್ನೂ ಓದಿ: ಒಂದೇ ಕುಟುಂಬದ ಮೂವರು ಹೆಣ್ಣು ಮಕ್ಕಳ ದುರಂತ ಸಾವು: ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ನಿಜವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ ಅಥವಾ ಇಲ್ಲವಾ ಎನ್ನುವ ಕುರಿತು ಈ ವಿಚಾರಣೆಯಿಂದ ಸತ್ಯ ಹೊರಬರಬೇಕಿದೆ. ವಿರೋಧ ಪಕ್ಷವಾದ ಬಿಜೆಪಿ ಮಾಡಿರುವ ಆರೋಪಕ್ಕೆ ಪುಷ್ಠಿ ಸಿಗಲಿದೆಯಾ ಅಥವಾ ಅವರಿಗೆ ನಿರಾಸೆಯಾಗಲಿದೆಯಾ ಕಾದು ನೋಡಬೇಕಿದೆ.SGF11 Women's Kanjivaram Pure Soft Silk Saree For Women Pure Golden Zari With Blouse Piece