ಕಬ್ಬಿಗೆ ಪ್ರತಿ ಟನ್‌ಗೆ 3,500 ರೂ. ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ವಿಜಯಪುರ ನಗರದ ಗಗನ್ ಮಹಲ್ ಬಳಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ನಡೆಸುತ್ತಿರುವ ಈ ತೀವ್ರ ಹೋರಾಟಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ರೈತರ ಮನವೊಲಿಕೆಗಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ಈ ಧರಣಿಯಲ್ಲಿ ಪಾಲ್ಗೊಂಡಿರುವ ನೂರಾರು ಕಬ್ಬು ಬೆಳೆಗಾರರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. Yash Gallery Women's Cotton Relaxed Fit Anarkali Kurta
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಬಿ. ಪಾಟೀಲ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಧರಣಿ ನಿರತ ರೈತರ ಮನವೊಲಿಸಲು ಪ್ರಯತ್ನಿಸಿದರು. ರೈತರ ಬೇಡಿಕೆ ಹಾಗೂ ಸರ್ಕಾರದ ನಿಲುವಿನ ಕುರಿತು ಸಚಿವರು ನೀಡುವ ಭರವಸೆಗಳು ಮತ್ತು ಸಂಧಾನದ ಮಾತುಕತೆ ನಿರ್ಣಾಯಕವಾಗಿದ್ದು, ರೈತರು ತಮ್ಮ ಧರಣಿಯನ್ನು ಹಿಂಪಡೆಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಈ ಹೋರಾಟವು ಉತ್ತರ ಕರ್ನಾಟಕದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ. ರೈತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಂ.ಬಿ. ಪಾಟೀಲ್ ಅವರು ಧರಣಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ, ರೈತರ ಮನವೊಲಿಸಲು ಪ್ರಯತ್ನಿಸಿದರು.ಇದನ್ನು ಓದಿ: ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಇಂದು ವಿಚಾರಣೆ ನಡೆಸಲಿರುವ ಹೈಕೋರ್ಟ್..!!
ಈ ಸಂಬಂಧವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ್ ಮತ್ತು ಎಂ.ಬಿ. ಪಾಟೀಲ್ ಅವರಿಗೆ ರೈತರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಲು ಸೂಚನೆ ನೀಡಿದ್ದಾರೆ. ಇದನ್ನು ಓದಿ: ₹100 ಕೋಟಿ ಭ್ರಷ್ಟಾಚಾರದ ಪ್ರಕರಣದಲ್ಲಿ ಉತ್ತರ ಪ್ರದೇಶದ ಟಾಪ್ ಪೊಲೀಸ್ ಅಧಿಕಾರಿ ಅಮಾನತು