ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥಸಂಚಲನಕ್ಕೆ ಸಂಬಂಧಿಸಿದಂತೆ, ರಾಜ್ಯದ ಐಟಿ-ಬಿಟಿ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮತ್ತೆ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸಭೆಯು ಹೈಕೋರ್ಟ್ ಆದೇಶದ ಮೇರೆಗೆ ಅಡ್ವೋಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಕೋರ್ಟ್ ಆದೇಶದ ಪ್ರಕಾರ ಸಭೆ ನಡೆಯುತ್ತಿದ್ದು, ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಸಭೆಗೆ ಆಗಮಿಸಿದ್ದಾರೆ.Sun Fashion And Lifestyle Women's Red Chanderi Stitched Printed Kurti for Women
ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ಈ ವೇಳೆ, ನಮ್ಮ ಸರ್ಕಾರದ ಉದ್ದೇಶ ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದು ಎಂದು ಖರ್ಗೆ ಹೇಳಿದರು. ಆರ್‌ಎಸ್‌ಎಸ್‌ನವರು ಇದೇ ವಿಚಾರವನ್ನು ರಾಜಕೀಯ ಬೆಳೆ ಬೇಯಿಸಿಕೊಳ್ಳುವುದಕ್ಕೆ ಬಳಸುತ್ತಿದ್ದಾರೆ ಎಂದು ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅದೇ ಕ್ಷೇತ್ರದಲ್ಲಿ, ಅದೇ ಸಮಯದಲ್ಲಿ ಯಾಕೆ ಪಥಸಂಚಲನ ಮಾಡಬೇಕು? ಎಂದು ಪ್ರಶ್ನಿಸಿದರು. ಇದೇ ವೇಳೆ, ಬೇಕಿದ್ದರೆ ಅವರು ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರನ್ನು ಕರೆಸಲಿ ಎಂದು ವ್ಯಂಗ್ಯವಾಡಿದರು. ಇದನ್ನು ಓದಿ: ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಮೂರು ದಿನಗಳ ರೈತ ಸ್ನೇಹಿ ಕಡಲೆಕಾಯಿ ಪರಿಷೆ
ಕೋರ್ಟ್ ಆದೇಶದ ಪಾಲನೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದಲೇ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಇದನ್ನು ಓದಿ: ನಂದಿನಿ ತುಪ್ಪದ ಬೆಲೆಯಲ್ಲಿ ₹90 ಏರಿಕೆ: ಕೆಎಂಎಫ್‌ನಿಂದ ಗ್ರಾಹಕರಿಗೆ ಬಿಸಿ ತುಪ್ಪ!