Skip to main content
ವಿಡಿಯೋ
politics

'ನವೆಂಬರ್ ಕ್ರಾಂತಿ' ಊಹಾಪೋಹದ ನಡುವೆ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ: ಹೈಕಮಾಂಡ್ ಭೇಟಿ ನಿರಾಕರಣೆ

By Vinutha U
 'ನವೆಂಬರ್ ಕ್ರಾಂತಿ' ಊಹಾಪೋಹದ ನಡುವೆ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ: ಹೈಕಮಾಂಡ್ ಭೇಟಿ ನಿರಾಕರಣೆ

ಈ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದು.

ಬೆಂಗಳೂರು, ನವೆಂಬರ್ 6: ರಾಜ್ಯ ರಾಜಕಾರಣದಲ್ಲಿ 'ನವೆಂಬರ್ ಕ್ರಾಂತಿ' ಕುರಿತ ಊಹಾಪೋಹಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿ.ಕೆ.ಶಿ.) ಅವರ ದೆಹಲಿ ಭೇಟಿಯು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿ ಭೇಟಿಯ ಕುರಿತು ಸ್ಪಷ್ಟನೆ ನೀಡಿರುವ ಡಿ.ಕೆ.ಶಿ., "ಎಲ್ಲಾ ಸುಳ್ಳು. ನಾನು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ" ಎಂಧು ಖಡಾಖಂಡಿತವಾಗಿ ಹೇಳಿದ್ದಾರೆ. ಬುಧವಾರ ರಾತ್ರಿ ದೆಹಲಿಯಲ್ಲೇ ತಂಗಿದ್ದ ಡಿಕೆ ಶಿವಕುಮಾರ್ ಅವರು ಇಂದು (ಗುರುವಾರ) ಬೆಂಗಳೂರಿಗೆ ವಾಪಸಾಗಲಿದ್ದಾರೆ. ಬಿಹಾರದಲ್ಲಿಂದು ಮೊದಲ ಹಂತದ ಮತಸಮರ - 121 ಕ್ಷೇತ್ರದಲ್ಲಿ ಮತಚಲಾವಣೆ

ಈ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದು. Shining Diva Fashion Crystal Tiara and Crown for Women Stylish Headband Crowns with Comb Tiaras for Girls Kids Queen Princess Wedding Bridal Birthday Gift Hair Accessories

ಮಹದಾಯಿ ವಿಚಾರದಲ್ಲೂ ಕೆಲವು ಅಂಶಗಳಿದ್ದು, ಸದ್ಯಕ್ಕೆ ಆ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.