ರಾಯಚೂರು ಜಿಲ್ಲೆಯ ಲಿಂಗಸುಗೂರು ಬಸ್ ಸ್ಟ್ಯಾಂಡ್ ಬಳಿ ಭಿಕ್ಷೆ ಬೇಡುತ್ತಿದ್ದ ಇಬ್ಬರು ಬಾಲಕರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹತ್ತಿರುವ ಭೀಕರ ಘಟನೆ ವರದಿಯಾಗಿದೆ. ಈ ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿಸಿದ್ದು, ಮತ್ತೊಬ್ಬನ ಸ್ಥಿತಿ ಆತಂಕಕರವಾಗಿದೆ. ಬಡತನದಿಂದಾಗಿ ರಸ್ತೆಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕರ ಜೀವನವೇ ಅಂತ್ಯಕ್ಕೆ ಕಾರಣವಾಗಿದೆ.
ಈ ದುರಂತದಲ್ಲಿ ಸಿದ್ದರಾಮ (12 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅವನ ಸಹೋದರ ಧನಂಜಯ (8 ವರ್ಷ) ಗಂಭೀರವಾಗಿ ಗಾಯಗೊಂಡು ಎರಡೂ ಕೈಗಳು ಕತ್ತರಿಸಲ್ಪಟ್ಟಿವೆ ಎಂದು ತಿಳಿದು ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತನು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. Motorola G45 5G (Viva Magenta, 8GB RAM, 128GB Storage)
ಬಸ್ ಸ್ಟ್ಯಾಂಡ್‌ಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಈ ಮಕ್ಕಳ ಮೇಲೆ ಹರಿದಿದೆ ಎನ್ನಲಾಗಿದೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೂ ಸಿದ್ದರಾಮನಿಗೆ ಚಿಕಿತ್ಸೆಯನ್ನು ನೀಡುವ ಮೊದಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಮಾಹಿತಿ ಬಂದಿಲ್ಲವಾದರೂ ಈ ಕುರಿತ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ದೂರಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ದೇವಿ ಅವಾರ್ಡ್ಸ್ 2025 - ನಗರದಲ್ಲಿಂದು 35 ನೇ ಆವೃತ್ತಿಯ ದೇವಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ